ಕತಾರ್ ತಲುಪಿದ ಪ್ರಧಾನಿ ನರೇಂದ್ರ ಮೋದಿ
ಐದು ರಾಷ್ಟ್ರಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ರಾತ್ರಿ ಕತಾರ್ ರಾಜಧಾನಿ...

Published On :
ದೋಹಾ: ಐದು ರಾಷ್ಟ್ರಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ರಾತ್ರಿ ಕತಾರ್ ರಾಜಧಾನಿ ದೋಹಾಕ್ಕೆ ತಲುಪಿದ್ದಾರೆ.
ಕತಾರ್ ನಲ್ಲಿ ಎರಡು ದಿನಗಳ ಕಾಲ ಉಳಿದುಕೊಳ್ಳಲಿರುವ ಪ್ರಧಾನಿ ಮೋದಿ ಅವರನ್ನು ಕತಾರ್ ಪ್ರಧಾನಿ ಅಬ್ದುಲ್ಲಾ ಬಿನ್ ನಾಸೆರ್ ಬಿನ್ ಖಾಲಿಫ ಅಲ್ ತಾನಿ ಅವರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ್ದಾರೆ.
ಕತಾರ್ ನೊಂದಿಗೆ ಉತ್ತಮ ಬಾಂಧವ್ಯ ಹೊಂದಲು ಭಾರತ ಆದ್ಯತೆ ನೀಡುತ್ತದೆ. ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧವನ್ನು ಬಲಗೊಳಿಸುವ ದೃಷ್ಟಿಯಿಂದ ಕತಾರ್ ಗೆ ಭೇಟಿ ನೀಡಿದ್ದೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಕಳೆದ ಎಂಟು ವರ್ಷಗಳ ಬಳಿಕ ಭಾರತದ ಪ್ರಧಾನಿ ಕತಾರ್ ಗೆ ಭೇಟಿ ನೀಡುತ್ತಿದ್ದಾರೆ. 2008ರಲ್ಲಿ ಪ್ರಧಾನಿ ಮನ್ ಮೋಹನ್ ಸಿಂಗ್ ಕತಾರ್ ಗೆ ಭೇಟಿ ನೀಡಿದ್ದರು.
ಉಭಯ ದೇಶಗಳ ವಾಣಿಜ್ಯ ಸಂಬಂಧವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಹೈಡ್ರೋಕಾರ್ಬನ್ ಕ್ಷೇತ್ರದಲ್ಲಿ ಪರಸ್ಪರ ಸಹಕಾರಕ್ಕೆ ಸಂಬಂಧಿಸಿದಂತೆ ಮಾತುಕತೆಗಳು ನಡೆಯಲಿವೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


