'ದೆಹಲಿಯಲ್ಲಿ ಸಂಪೂರ್ಣ ಜಂಗಲ್ ರಾಜ್ ಆಡಳಿತ': ಮೋದಿ ವಿರುದ್ಧ ಕೇಜ್ರಿವಾಲ್ ಕಿಡಿ
ರಾಜಧಾನಿಯಲ್ಲಿ ಸಂಪೂರ್ಣ ಜಂಗಲ್ ರಾಜ್ ಆಡಳಿತ ನಡೆಸುತ್ತಿದ್ದಾರೆಂದು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ...

ನವದೆಹಲಿ: ರಾಜಧಾನಿಯಲ್ಲಿ ಸಂಪೂರ್ಣ ಜಂಗಲ್ ರಾಜ್ ಆಡಳಿತ ನಡೆಸುತ್ತಿದ್ದಾರೆಂದು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಸೋಮವಾರ ಕಿಡಿಕಾರಿದ್ದಾರೆ.
ಈ ಕುರಿತಂತೆ ಟ್ವಿಟರ್ ನಲ್ಲಿ ಹೇಳಿಕೊಂಡಿರುವ ಅವರು, ಲೆಫ್ಟಿನೆಂಟ್ ಗೌರ್ನರ್ ನಜೀಬ್ ಜಂಗ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯಲ್ಲಿ ಸಂಪೂರ್ಣ ಜಂಗಲ್ ರಾಜ್ ಆಡಳಿತ ನಡೆಸುತ್ತಿದ್ದು, ರಾಜಧಾನಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಏನನ್ನು ಮಾಡಿದ್ದಾರೆಂದು ಪ್ರಶ್ನಿಸಿದ್ದಾರೆ.
ದೆಹಲಿ ಪೊಲೀಸರು ರಾಜ್ಯದಲ್ಲಿ ಏನೇ ಆದರೂ ಕೇಂದ್ರ ಸರ್ಕಾರಕ್ಕೆ ವರದಿ ನೀಡಿತ್ತಾರೆಯೇ ಹೊರತು ಕೇಜ್ರಿವಾಲ್ ಅಧಿಕಾರದ ರಾಜ್ಯ ಸರ್ಕಾರಕ್ಕೆ ನೀಡುವುದಿಲ್ಲ ಎಂದಿದ್ದಾರೆ.
ದೆಹಲಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೆಲವು ದಿನಗಳ ಹಿಂದಷ್ಟೇ 50 ಮಹಿಳೆ ಹಾಗೂ ಆಕೆಯ ಮಕ್ಕಳಾದ 19 ಮತ್ತು 9 ವರ್ಷದ ಹೆಣ್ಣುಮಕ್ಕಳನ್ನು ಧಾರುಣವಾಗಿ ಹತ್ಯೆ ಮಾಡಲಾಗಿತ್ತು. ಇದರಂತೆ 4 ವರ್ಷದ ಬಾಲಕಿ ಮೇಲೆ 11 ವರ್ಷದ ಅಪ್ರಾಪ್ತ ಬಾಲಕನೊಬ್ಬ ಅತ್ಯಾಚಾರ ಮಾಡಿದ ಪ್ರಕರಣವೂ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಅವರು ಟ್ವಿಟರ್ ನಲ್ಲಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


