ದೇಶ

ಪುದುಚೆರಿ ಮುಖ್ಯಮಂತ್ರಿಯಾಗಿ ವಿ. ನಾರಾಯಣಸ್ವಾಮಿ ಪ್ರಮಾಣ ವಚನ

ಮಾಜಿ ಕೇಂದ್ರ ಸಚಿವ ವಿ. ನಾರಾಯಣಸ್ವಾಮಿ ಪುದುಚೆರಿ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು....

ಪುದುಚೆರಿ ಮುಖ್ಯಮಂತ್ರಿಯಾಗಿ ವಿ. ನಾರಾಯಣಸ್ವಾಮಿ ಪ್ರಮಾಣ ವಚನ
ಲೆಪ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಮತ್ತು ನೂತನ ಮುಖ್ಯಮಂತ್ರಿ ವಿ ನಾರಾಯಣ ಸ್ವಾಮಿ
Published On :

ಪುದುಚೆರಿ: ಮಾಜಿ ಕೇಂದ್ರ ಸಚಿವ ವಿ. ನಾರಾಯಣಸ್ವಾಮಿ ಪುದುಚೆರಿ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ನಾರಾಯಣಸ್ವಾಮಿ ಅವರ ಜೊತೆ ಐವರು ಕಾಂಗ್ರೆಸ್ ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು. ಲೆಪ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಆರು ಮಂದಿ ತಂಡಕ್ಕೆ ಪ್ರಮಾಣ ವಚನ ಬೋಧಿಸಿದರು. 30 ಸದಸ್ಯ ಬಲದ ಪುದುಚೆರಿ ವಿಧಾನ ಸಭೆಯಲ್ಲಿ ಕಾಂಗ್ರೆಸ್ -ಡಿಎಂಕೆ ಮೈತ್ರಿಕೂಟವು 17 ಸದಸ್ಯರನ್ನು ಹೊಂದಿದೆ.

ಪುದುಚೆರಿಯ ಬೀಚ್ ರೋಡ್ ನಲ್ಲಿರುವ ಐತಿಹಾಸಿಕ ಗಾಂಧಿ ಭವನದಲ್ಲಿ ಮಧ್ಯಾಹ್ನ ನಡೆದ ಪದಗ್ರಹಣ ಕಾರ್ಯಕ್ರಮ ಜರುಗಿತು. ಎರಡನೇ ಯುಪಿಎ ಸರ್ಕಾರದಲ್ಲಿ ನಾರಾಯಣ ಸ್ವಾಮಿ ಕೇಂದ್ರ ಸಚಿವರಾಗಿ ಕೆಲಸ ನಿರ್ವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.