ತೃಣಮೂಲ ಕಾಂಗ್ರೆಸ್ ಗೆ ಸೇರಿದ ತ್ರಿಪುರಾದ 6 ಕಾಂಗ್ರೆಸ್ ಶಾಸಕರು
ತ್ರಿಪುರದಲ್ಲಿ ಕಾಂಗ್ರೆಸ್ ಪಕ್ಷದ 6 ಶಾಸಕರು ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆಗೊಂದಿದ್ದಾರೆ.

ಅಗರ್ತಲಾ: ತ್ರಿಪುರದಲ್ಲಿ ಕಾಂಗ್ರೆಸ್ ಪಕ್ಷದ 6 ಶಾಸಕರು ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ.
ಕಾಂಗ್ರೆಸ್ ಶಾಸಕರು ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದರ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ವಿಧಾನಸಭಾಧ್ಯಕ್ಷ ರಾಮೇಂದ್ರ ಚಂದ್ರ ದೇವ್ ನಾಥ್, ಕಾಂಗ್ರೆಸ್ ನ ಸುದೀಪ್ ರಾಯ್ ಬರ್ಮಾನ್ ಹಾಗೂ ಅವರೊಂದಿಗೆ ಇನ್ನು ೩ ಶಾಸಕರು ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿರುವುದಾಗಿ ಪತ್ರ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ವಿಧಾನಸಭಾಧ್ಯಕ್ಷರಿಗೆ ನೀಡಲಾಗಿರುವ ಪತ್ರದಲ್ಲಿ ಕಾಂಗ್ರೆಸ್ ನ 6 ಶಾಸಕರ ಸಹಿ ಇದ್ದು, 6 ಶಾಸಕರನ್ನು ವೈಯಕ್ತಿಕವಾಗಿ ಭೇಟಿ ಮಾಡಿ, ನಿಯಮಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ರಾಮೇಂದ್ರ ಚಂದ್ರ ದೇವ್ ನಾಥ್ ತಿಳಿಸಿದ್ದಾರೆ.
ಸುದೀಪ್ ರಾಯ್ ಬರ್ಮಾನ್ ಅವರೊಂದಿಗೆ ಬಿಸ್ವಬಂಧು ಸೇನ್, ದಿಬ ಚಂದ್ರ, ಪ್ರಣ್ಜಿತ್ ಸಿಂಘ ರಾಯ್ ಹಾಗೂ ದಿಲೀಪ್ ಸರ್ಕಾರ್ ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿರುವ ಶಾಸಕರಾಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಪಕ್ಷ ಎಡಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಸುದೀಪ್ ರಾಯ್ ಬರ್ಮಾನ್ ಕಾಂಗ್ರೆಸ್ ಪಕ್ಷ ತೊರೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


