ಬಾಕಿ ಹಣ ಪಾವತಿಸದ ಹಿನ್ನೆಲೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಕೇಸ್
ಕೇರಳದ ಖ್ಯಾತ ಕಟ್ಟಡ ನಿರ್ಮಾಣ ಗುತ್ತಿಗೆದಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಬಾಕಿ ಹಣ ಪಾವತಿ ಮಾಡದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ತಿರುವನಂತಪುರಮ್: ಕೇರಳದ ಖ್ಯಾತ ಕಟ್ಟಡ ನಿರ್ಮಾಣ ಗುತ್ತಿಗೆದಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಬಾಕಿ ಹಣ ಪಾವತಿ ಮಾಡದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಕೇರಳದ ಹೀಥರ್ ಕಟ್ಟಡ ನಿರ್ಮಾಣ ಉದ್ಯಮಗಳ ಸಂಸ್ಥೆ ಸೋನಿಯಾ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸೋನಿಯಾ ಗಾಂಧಿ ಅವರೊಂದಿಗೆ ತಿರುವನಂತಪುರಮ್ ನ ರಾಜೀವ್ ಗಾಂಧಿ ಇಸ್ಟಿಟ್ಯೂಟ್ ಆಫ್ ಡೆವಲಪ್ ಮೆಂಟ್ ಸ್ಟಡೀಸ್ ನ ಅಧ್ಯಕ್ಷ ರಮೇಶ್ ಚೆನ್ನಿಥಾಲ, ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿಎಂ ಸುಧೀರನ್ ಅವರ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಹೀಥರ್ ಕಟ್ಟಡ ನಿರ್ಮಾಣ ಉದ್ಯಮಗಳ ಸಂಸ್ಥೆ ಪಾಲುದಾರ ರಾಜೀವ್ ಸೋನಿಯಾ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದು, ತಿರುವನಂತ ಪುರಂ ನಲ್ಲಿ ರಾಜೀವ್ ಗಾಂಧಿ ಇಸ್ಟಿಟ್ಯೂಟ್ ಆಫ್ ಡೆವಲಪ್ ಮೆಂಟ್ ಸ್ಟಡೀಸ್ ನ ಕಟ್ಟಡ ನಿರ್ಮಾಣ ಕಾಮಗಾರಿಗಾಗಿ ಗುತ್ತಿಗೆ ನೀಡಲಾಗುತ್ತು. ಆದರೆ ಈಗ ಪ್ರದೇಶ ಕಾಂಗ್ರೆಸ್ ಸಮಿತಿ ಕಟ್ಟಡ ನಿರ್ಮಾಣ ಕಾಮಗಾರಿ ಯೋಜನಗೆ ಹಣವಿಲ್ಲ ಎಂದು ಹೇಳುತ್ತಿದೆ ಅಲ್ಲದೇ ಕಟ್ಟಡ ನಿರ್ಮಾಣ ಕಾಮಗಾರಿಯ ಬಾಕಿ ಹಣವನ್ನೂ ಈ ವರೆಗೂ ನೀಡಿಲ್ಲ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
2005 ರ ಅಕ್ಟೋಬರ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜೀವ್ ಗಾಂಧಿ ಇನ್ಸ್ ಟಿಟ್ಯೂಟ್ ನ್ನು ಉದ್ಘಾಟನೆ ಮಾಡಿದ್ದರು. ಬಾಕಿ ಇರುವ ಹಣ ಪಾವತಿ ಮಾಡುವಂತೆ ಲೀಗಲ್ ನೋಟಿಸ್ ಜಾರಿಗೊಳಿಸಿದ್ದ ಬಳಿಕ ಕಾಂಗ್ರೆಸ್ ಅಧ್ಯಕ್ಷರು ಹಣ ಪಾವತಿ ಮಾಡುವಂತೆ ಕೆಪಿಸಿಸಿ ಗೆ ಸೂಚನೆ ನೀಡಿದ್ದರು. ಆದರೆ ಈ ವರೆಗೂ ಕಾಮಗಾರಿಯ ಬಾಕಿ ಹಣವನ್ನು ಪಾವತಿ ಮಾಡಿಲ್ಲ ಎಂದು ರಾಜೀವ್ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


