ದೇಶ

ದೆಹಲಿ ವಿಧಾನಸಭೆ: ಬೆಂಚ್ ಮೇಲೆ ನಿಂತು ಪ್ರತಿಭಟಿಸಿದ ಬಿಜೆಪಿ ಶಾಸಕ

ದೆಹಲಿ ವಿಧಾನಸಭೆಯಲ್ಲಿ ತನಗೆ ಮಾತನಾಡಲು ಅವಕಾಶ ನೀಡಲಿಲ್ಲ ಎಂಬ ಕಾರಣಕ್ಕೆ ಬಿಜೆಪಿ ಶಾಸಕರೊಬ್ಬರು ಬೆಂಚ್ ಮೇಲೆ ನಿಂತು...

ದೆಹಲಿ ವಿಧಾನಸಭೆ: ಬೆಂಚ್ ಮೇಲೆ ನಿಂತು ಪ್ರತಿಭಟಿಸಿದ ಬಿಜೆಪಿ ಶಾಸಕ
ಬಿಜೆಪಿ ಶಾಸಕ ವಿಜೇಂದ್ರ ಗುಪ್ತಾ
Published On :
ನವದೆಹಲಿ: ದೆಹಲಿ ವಿಧಾನಸಭೆಯಲ್ಲಿ ತನಗೆ ಮಾತನಾಡಲು ಅವಕಾಶ ನೀಡಲಿಲ್ಲ ಎಂಬ ಕಾರಣಕ್ಕೆ ಬಿಜೆಪಿ ಶಾಸಕರೊಬ್ಬರು ಬೆಂಚ್ ಮೇಲೆ ನಿಂತು ಸ್ಪೀಕರ್ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಶುಕ್ರವಾರ ನಡೆಯಿತು.
ಇಂದು ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆಯೇ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಸದಸ್ಯರು ಹಾಗೂ ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಶಾಸಕ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ವಿಜೇಂದ್ರ ಗುಪ್ತಾ ಅವರು ತನಗೆ ಮಾತನಾಡಲು ಅವಕಾಶ ನೀಡಬೇಕೆಂದು ಮನವಿ ಮಾಡಿದರು. ಆದರೆ ಸ್ಪೀಕರ್ ರಾಮ್ ನಿವಾಸ್ ಅವರು ಗುಪ್ತಾಗೆ ಮಾತನಾಡಲು ಅವಕಾಶ ನೀಡಲಿಲ್ಲ. ಇದರಿಂದ ಆಕ್ರೋಶಗೊಂಡ ಗುಪ್ತಾ, ಏಕಾಏಕಿ ಬೆಂಚ್ ಮೇಲೆ ಹತ್ತಿ ಮಾತನಾಡಲು ಆರಂಭಿಸಿದ್ದರು. 
ಪ್ರತಿಪಕ್ಷದ ನಾಯಕನ ಈ ವರ್ತನೆ ತೀವ್ವ ಅಸಮಾಧಾನ ವ್ಯಕ್ತಪಡಿಸಿದ ಸ್ಪೀಕರ್, ಇದು ತುಂಬಾ ಅಪಮಾನಕಾರಿ ವರ್ತನೆ...ಸದಸ್ಯರೊಬ್ಬರು ಬೆಂಚ್ ಮೇಲೆ ಹತ್ತಿ ಪ್ರತಿಭಟನೆ ನಡೆಸುತ್ತಾರೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಇದು ನಿಜಕ್ಕೂ ಆಘಾತಕಾರಿ ಘಟನೆ. ವಿಧಾನಸಭೆಯಂತಹ ಪ್ರಜಾಪ್ರಭುತ್ವ ಸಂಸ್ಥೆಗಳ ಬಗ್ಗೆ ಬಿಜೆಪಿಗೆ ಗೌರವ ಇಲ್ಲ ಎಂದಿದ್ದಾರೆ.
ಈ ಹಿಂದಿನ ಕಲಾಪದಲ್ಲಿಯೂ ವಿಜೇಂದ್ರ ಗುಪ್ತಾ ಅವರು ಪ್ರತಿಭಟನೆ ನಡೆಸಿದಾಗ ಮಾರ್ಷಲ್ ಗಳು ಎತ್ತಿಕೊಂಡು ಹೋಗಿ ಸದನದಿಂದ ಹೊರಹಾಕಿದ್ದ ಘಟನೆ ನಡೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.