ದೇಶ

2017 ರ ಉತ್ತರ ಪ್ರದೇಶ ಚುನಾವಣೆಗೆ ರಾಜನಾಥ್ ಸಿಂಗ್ ಬಿಜೆಪಿ ಪಕ್ಷದ ಸಿಎಂ ಅಭ್ಯರ್ಥಿ?

2017 ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಂಗೆ ಬಿಜೆಪಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಬಿಂಬಿಸುವ ಸಾಧ್ಯತೆ ಇದೆ.

2017 ರ ಉತ್ತರ ಪ್ರದೇಶ ಚುನಾವಣೆಗೆ ರಾಜನಾಥ್ ಸಿಂಗ್ ಬಿಜೆಪಿ ಪಕ್ಷದ ಸಿಎಂ ಅಭ್ಯರ್ಥಿ?
Published On :

ನವದೆಹಲಿ: 2017 ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಬಿಂಬಿಸುವ ಸಾಧ್ಯತೆ ಇದೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿಕೊಳ್ಳುತ್ತಿದ್ದು, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಬಿಜೆಪಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಟಲ್ ಬಿಹಾರಿ ವಾಜಪೇಯಿ ಸಚಿವ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದ ರಾಜನಾಥ್ ಸಿಂಗ್ ಈ ಹಿಂದೆಯೂ ಉತ್ತರ ಪ್ರದೇಶ ಮುಖ್ಯಂಮಂತ್ರಿಯಾಗಿದ್ದರು.

ಪ್ರಸ್ತುತ ನಡೆಯುತ್ತಿರುವ ರಾಜ್ಯಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಿಂದ ಬಿಜೆಪಿ 11 ಸ್ಥಾನಗಳನ್ನು ಪಡೆಯುವುದರಲ್ಲಿ ರಾಜನಾಥ್ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದಾರೆ. ರಾಜನಾಥ್ ಸಿಂಗ್ ಅವರೊಂದಿಗೆ ಉತ್ತರ ಪ್ರದೇಶದ ಸಿಎಂ ಅಭ್ಯರ್ಥಿ ರೇಸ್ ನಲ್ಲಿ ಯುವ ನಾಯಕ ವರುಣ್ ಗಾಂಧಿಯೂ ಇದ್ದಾರೆ.

ಏಪ್ರಿಲ್ ನಲ್ಲಿ ಈ ಟಿವಿ ನಡೆಸಿದ್ದ ಸಮೀಕ್ಷೆ ಪ್ರಕಾರ ಉತ್ತರ ಪ್ರದೇಶದಲ್ಲಿ ವರುಣ್ ಗಾಂಧಿ ಅತ್ಯಂತ ಜನಪ್ರಿಯ ನಾಯಕರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜನಾಥ್ ಸಿಂಗ್ ಅವರ ಹೆಸರೊಂದಿಗೆ ವರುಣ್ ಗಾಂಧಿ ಹೆಸರೂ ಸಿಎಂ ಅಭ್ಯರ್ಥಿ ರೇಸ್ ನಲ್ಲಿ ಕೇಳಿಬರುತ್ತಿದೆ.    
ವರುಣ್ ಗಾಂಧಿ ಉತ್ತರ ಪ್ರದೇಶ ಸಿಎಂ ಆಗಬೇಕೆಂದು ಶೇ.51 ರಷ್ಟು ಜನರು ಅಭಿಪ್ರಾಯಪಟ್ಟಿದ್ದಾರೆ. ರಾಜನಾಥ್ ಸಿಂಗ್ ಪರವಾಗಿ ಶೇ. 28 ರಷ್ಟು ಮತಗಳಿವೆ. ಇನ್ನು ಕಲ್ಯಾಣ್ ಸಿಂಗ್ ರನ್ನು ಶೇ.10 ರಷ್ಟು ಜನ ಆಯ್ಕೆ ಮಾಡಿದ್ದರೆ, ಶೇ.8 ರಷ್ಟು ಜನರು ಯೋಗಿ ಆದಿತ್ಯನಾಥ್ ಪರ ಒಲವು ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.