ದೇಶ

ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು ಚುನಾವಣೆ: ಚುನಾವಣಾ ಆಯೋಗ

ಮತಕ್ಕಾಗಿ ಹಣದ ವಿಚಾರವಾಗಿ ಸ್ಟಿಂಗ್ ಆಪರೇಷನ್ ಮೂಲಕ ತೀವ್ರ ಚರ್ಚೆಗೆ ಗುರಿಯಾಗಿದ್ದ ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು ಚುನಾವಣೆ ನಡೆಯಲಿದೆ

ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು ಚುನಾವಣೆ: ಚುನಾವಣಾ ಆಯೋಗ
ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು ಚುನಾವಣೆ
Published On :

ನವದೆಹಲಿ: ಮತಕ್ಕಾಗಿ ಹಣದ ವಿಚಾರವಾಗಿ ಸ್ಟಿಂಗ್ ಆಪರೇಷನ್ ಮೂಲಕ ತೀವ್ರ ಚರ್ಚೆಗೆ ಗುರಿಯಾಗಿದ್ದ ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಘೋಷಿಸಿದೆ.

ಜೂ.30 ಕ್ಕೆ ಹಾಲಿ ರಾಜ್ಯಸಭಾ ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಒಟ್ಟು ಏಳು ಸ್ಥಾನಗಳ ಪೈಕಿ ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಕಾಂಗ್ರೆಸ್ ನಿಂದ ಮೂವರು, ಬಿಜೆಪಿ ಹಾಗೂ ಜೆಡಿಎಸ್ ನಿಂದ ತಲಾ ಒಬ್ಬ ಅಭ್ಯರ್ಥಿ ರಾಜ್ಯಸಭಾ ಚುನಾವಣೆ ಕಣದಲ್ಲಿದ್ದು ಚುನಾವಣೆ ತೀವ್ರ ಕುತೂಹಲ ಕೆರಳಿದೆ. ಕಾಂಗ್ರೆಸ್ ನಿಂದ ಆಸ್ಕರ್ ಫರ್ನಾಂಡೀಸ್, ಜೈರಾಮ್ ರಮೇಶ್, ಬಿಜೆಪಿಯಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಜೆಡಿಎಸ್ ನಿಂದ ಬಿಎಂ ಫಾರೂಕ್ ಕಣಕ್ಕಿಳಿದಿದ್ದಾರೆ.

ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಪರ ಮತ ಹಾಕಲು ಶಾಸಕರು ಹಣದ ಬೇಡಿಕೆ ಇಟ್ಟಿದ್ದ ವಿಷಯ ಸ್ಟಿಂಗ್ ಆಪರೇಷನ್ ಮೂಲಕ ಬಹಿರಂಗವಾದ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಸಭಾ ಚುನಾವಣೆಯನ್ನು ಮುಂದೂಡುವಂತೆ ಒತ್ತಾಯಿಸಿತ್ತು. ಆದರೆ ಚುನಾವಣಾ ಆಯೋಗ ಮಾತ್ರ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು ಚುನಾವಣೆ ನಡೆಯಲಿದೆ ಎಂದು ಘೋಷಿಸಿದೆ. ಇದೇ ವೇಳೆ  ಮತ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೂ ಕೇಂದ್ರ ಚುನಾವಣಾ ಆಯೋಗ ಆದೇಶಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.