ದೇಶ

ರಾಜ್ಯಸಭೆಯ 27 ಸ್ಥಾನಗಳಿಗೆ ಮತದಾನ ಆರಂಭ

ಶನಿವಾರ 7 ರಾಜ್ಯಗಳಲ್ಲಿ 27 ರಾಜ್ಯಸಭಾ ಸದಸ್ಯರ ಆಯ್ಕೆಗೆ ಮತದಾನ ನಡೆಯುತ್ತಿದೆ. ಉತ್ತರ ಪ್ರದೇಶದಿಂದ 11, ಕರ್ನಾಟಕ...

ರಾಜ್ಯಸಭೆಯ 27 ಸ್ಥಾನಗಳಿಗೆ ಮತದಾನ ಆರಂಭ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಶನಿವಾರ 7 ರಾಜ್ಯಗಳಲ್ಲಿ 27 ರಾಜ್ಯಸಭಾ ಸದಸ್ಯರ ಆಯ್ಕೆಗೆ ಮತದಾನ ನಡೆಯುತ್ತಿದೆ.

ಉತ್ತರ ಪ್ರದೇಶದಿಂದ 11, ಕರ್ನಾಟಕ ಮತ್ತು ರಾಜಸ್ಥಾನಗಳಿಂದ 4 ಸ್ಥಾನಗಳಿಗೆ, ಮಧ್ಯ ಪ್ರದೇಶದಿಂದ ಮೂರು ಸ್ಥಾನಗಳಿಗೆ, ಹರ್ಯಾಣ ಮತ್ತು ಜಾರ್ಖಂಡ್ ರಾಜ್ಯಗಳಿಂದ ತಲಾ ಎರಡು ಹಾಗೂ ಉತ್ತರಾಖಂಡ ರಾಜ್ಯದಿಂದ ಒಂದು ಸ್ಥಾನಕ್ಕೆ ಇಂದು ಮತದಾನ ನಡೆಯುತ್ತಿದೆ.

ರಾಜ್ಯಸಭೆಯಲ್ಲಿ ತೆರವಾಗಿರುವ ಒಟ್ಟು 57 ಸ್ಥಾನಗಳ ಪೈಕಿ 27 ಸ್ಥಾನಗಳಿಗೆ ಮಾತ್ರ ಚುನಾವಣೆ ನಡೆಯುತ್ತಿದೆ. ಇನ್ನುಳಿದ 30 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು ನಡೆಯುತ್ತಿರುವ ಮತದಾನದ ಪ್ರಮುಖ ಅಭ್ಯರ್ಥಿಗಳೆಂದರೆ ಕೇಂದ್ರ ಸಚಿವರಾದ ಸುರೇಶ್ ಪ್ರಭು, ಪಿಯೂಷ್ ಗೋಯಲ್, ಖ್ಯಾತ ನ್ಯಾಯವಾದಿ ರಾಮ್ ಜೇಠ್ಮಲಾನಿ, ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ಮಿಸಾ ಭಾರತಿ ಮತ್ತು ಮಾಜಿ ಜೆಡಿ(ಯು) ಅಧ್ಯಕ್ಷ ಶರದ್ ಯಾದವ್.

ಉತ್ತರ ಪ್ರದೇಶದಲ್ಲಿ 11 ಸ್ಥಾನಗಳಿಗೆ 12 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಸಮಾಜವಾದಿ ಪಕ್ಷ 7 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ, ಬಹುಜನ ಸಮಾಜ ಪಕ್ಷ ಎರಡು ಮತ್ತು ಭಾರತೀಯ ಜನತಾ ಪಕ್ಷ ಹಾಗೂ ಕಾಂಗ್ರೆಸ್ ತಲಾ ಒಂದು ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ. ಬಿಜೆಪಿ ಸ್ವತಂತ್ರ ಅಭ್ಯರ್ಥಿ ಪ್ರೀತಿ ಮಹಾಪಾತ್ರ ಅವರಿಗೆ ಬೆಂಬಲ ನೀಡುತ್ತಿದ್ದು, ಅದು ಕಾಂಗ್ರೆಸ್ ಅಭ್ಯರ್ಥಿ ಕಪಿಲ್ ಸಿಬಲ್ ಮೇಲೆ ಪರಿಣಾಮ ಬೀರಲಿದೆ. ಸಿಬಲ್ ಅವರು ಮಾಯಾವತಿಯವರ ಬಿಎಸ್ ಪಿ ಮತ್ತು ಅಜಿತ್ ಸಿಂಗ್ ರ ಆರ್ ಎಲ್ ಡಿಯ ಬೆಂಬಲ ಕೋರಲಿದ್ದಾರೆ.

ಮಧ್ಯಪ್ರದೇಶದಲ್ಲಿ ಬಿಜೆಪಿಯ ಇಬ್ಬರು ಅಭ್ಯರ್ಥಿಗಳ ಗೆಲುವು ಖಚಿತ, ಆದರೆ ಮೂರನೇ ಅಭ್ಯರ್ಥಿಯ ಗೆಲುವಿಗೆ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಭಾರೀ ಪೈಪೋಟಿಯಿದೆ.
ಜಾರ್ಖಂಡ್  ರಾಜ್ಯದಿಂದ ಎರಡು ರಾಜ್ಯಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ.ಬಿಜೆಪಿ ಅಭ್ಯರ್ಥಿ ಮಹೇಶ್ ಪೊದ್ದರ್ ಮತ್ತು ಕಾಂಗ್ರೆಸ್ ಬೆಂಬಲಿತ ಜಾರ್ಖಂಡ್ ಮುಕ್ತಿ ಮೋರ್ಚಾ ಅಭ್ಯರ್ಥಿ ಬಸಂತ್ ಸೊರೆನ್ ಮಧ್ಯೆ ಹಣಾಹಣಿ ನಡೆಯಲಿದೆ.

ಇನ್ನು ಉತ್ತರಾಖಂಡ್ ನಲ್ಲಿ ಮೂವರು ಅಭ್ಯರ್ಥಿಗಳು ಒಂದು ಸೀಟಿಗೆ ಸ್ಪರ್ಧಾ ಕಣದಲ್ಲಿದ್ದಾರೆ. ಕಾಂಗ್ರೆಸ್ ನ ಪ್ರದೀಪ್ ತಮ್ತಾ ಮತ್ತು ಇಬ್ಬರು ಸ್ವತಂತ್ರ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಎಸ್ ಪಿ ಶಾಸಕರು ಇಲ್ಲಿ ಗೆಲುವಿನ ನಿರ್ಧಾರರಾಗಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ.
ಕುದುರೆ ವ್ಯಾಪಾರ, ವೋಟಿಗಾಗಿ ಹಣದ ಬೇಡಿಕೆಯ ಆರೋಪ ಈ ಬಾರಿಯ ರಾಜ್ಯಸಭಾ ಚುನಾವಣೆ ಮೇಲೆಯೂ ಕರಿನೆರಳು ಬಿದ್ದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.