ದೆಹಲಿ: ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ
ದೆಹಲಿಯಲ್ಲಿ ಮತ್ತೊಂದು ಅಮಾನವೀಯ ಕೃತ್ಯ ನಡೆದಿದೆ. 23 ವರ್ಷದ ಮಹಿಳೆಯೋರ್ವಳನ್ನು ಅಪಹರಣ ಮಾಡಿ ನಂತರ ಚಲಿಸುತ್ತಿದ್ದ ಕಾರಿನಲ್ಲಿ ಆಕೆಯ ಮೇಲೆ ..

ನವದೆಹಲಿ: ದೆಹಲಿಯಲ್ಲಿ ಮತ್ತೊಂದು ಅಮಾನವೀಯ ಕೃತ್ಯ ನಡೆದಿದೆ. 23 ವರ್ಷದ ಮಹಿಳೆಯೋರ್ವಳನ್ನು ಅಪಹರಣ ಮಾಡಿ ನಂತರ ಚಲಿಸುತ್ತಿದ್ದ ಕಾರಿನಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ.
ನಿಜಾಮುದ್ದೀನ್ ಪ್ರದೇಶದಿಂದ ಬೇರೆಡೆ ಹೋಗುತ್ತಿದ್ದ ವೇಳೆ ಕಾರಿನಲ್ಲಿ ಬಂದ ಮೂವರು ತಮ್ಮ ಕಾರಿನಲ್ಲಿ ಡ್ರಾಪ್ ಮಾಡುವುದಾಗಿ ಹೇಳಿ ಮಹಿಳೆಗೆ ಕಾರು ಹತ್ತಲು ಹೇಳಿದ್ದಾರೆ. ಆದರೆ ಅದಕ್ಕೆ ಯುವತಿ ನಿರಾಕರಣೆ ಮಾಡುತ್ತಿದ್ದಂತೆ ವಾಹನದ ಒಳಗೆ ಬಲವಂತವಾಗಿ ಆಕೆಯನ್ನು ಹತ್ತಿಸಿಕೊಂಡಿದ್ದಾರೆ.
ನಂತರ ಯುವತಿಗೆ ಕಿರುಕುಳ ನೀಡಲು ಆರಂಭಿಸಿದ್ದಾರೆ. ಇದಕ್ಕೆ ಯುವತಿ ಪ್ರತಿರೋಧಿಸುತ್ತಿದ್ದಂತೆ ಮೂವರು ದುಷ್ಕರ್ಮಿಗಳು ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ. ಸರಿ ಸುಮಾರು ಎರಡು ಗಂಟೆಗಳ ಕಾಲ ಕಾರಿನಲ್ಲಿ ಆಕೆಗೆ ಚಿತ್ರಹಿಂಸೆ ನೀಡಿದ ಅವರು ನಂತರ ಸನ್‌ಲೈಟ್ ಕಾಲೋನಿಯ ಫ್ಲೈಓವರ್ ಸಮೀಪ ಆಕೆಯನ್ನು ಇಳಿಸಿ ಪರಾರಿಯಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಮಹಿಳೆಯ ಅಪಹರಣ ಹಾಗೂ ಸಾಮೂಹಿಕ ಅತ್ಯಾಚಾರ ಪ್ರಕರಣದಡಿ ಕೇಸ್ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


