ಕೈರಾನ ಸಾಮೂಹಿಕ ವಲಸೆ ವಿಚಾರ ಉತ್ತರ ಪ್ರದೇಶದ ಜವಾಬ್ದಾರಿ: ಕಿರಣ್ ರಿಜಿಜು
ಶಾಮ್ಲಿ ಜಿಲ್ಲೆಯ ಕೈರಾನದಲ್ಲಿ ಹಿಂದೂ ಕುಟುಂಬಗಳು ಸಾಮೂಹಿಕ ವಲಸೆ ಹೋಗುತ್ತಿರುವ ವಿಚಾರದ ಜವಾಬ್ದಾರಿಯನ್ನು ಉತ್ತರ ಪ್ರದೇಶ ಸರ್ಕಾರ ಹೊತ್ತುಕೊಳ್ಳಲಿದೆ...

ಅಲಹಾಬಾದ್: ಶಾಮ್ಲಿ ಜಿಲ್ಲೆಯ ಕೈರಾನದಲ್ಲಿ ಹಿಂದೂ ಕುಟುಂಬಗಳು ಸಾಮೂಹಿಕ ವಲಸೆ ಹೋಗುತ್ತಿರುವ ವಿಚಾರದ ಜವಾಬ್ದಾರಿಯನ್ನು ಉತ್ತರ ಪ್ರದೇಶ ಸರ್ಕಾರ ಹೊತ್ತುಕೊಳ್ಳಲಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು ಸೋಮವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ತಮ್ಮ ಸ್ವಂತ ದೇಶದಲ್ಲಿನ ಗ್ರಾಮದಲ್ಲಿ ಜನರು ನೆಲೆಯೂರಲು ಇಚ್ಛಿಸಿದ್ದೇ ಆದರೆ, ಆ ಜವಾಬ್ದಾರಿಯನ್ನು ಉತ್ತರ ಪ್ರದೇಶ ಸರ್ಕಾರ ಹೊತ್ತುಕೊಳ್ಳಲಿದೆ. ರಾಜ್ಯ ಸರ್ಕಾರ ನಮ್ಮಿಂದ ಯಾವುದೇ ಸಹಾಯ ಕೇಳಿದರೂ ನಾವು ಸಹಾಯ ಮಾಡಲು ಸಿದ್ಧರಿದ್ದೇವೆಂದು ಹೇಳಿದ್ದಾರೆ.
ಈ ರೀತಿಯ ಘಟನೆಗಳು ನಡೆಯಬಾರದು. ಕುಸಿದ ಕಾನೂನು ವ್ಯವಸ್ಥೆಯ ಬಗ್ಗೆ ವರದಿಯನ್ನು ಪಡೆದುಕೊಂಡು ಸಮಸ್ಯೆಯನ್ನು ಗ್ರಹಿಸುವ ಪ್ರಯತ್ನವನ್ನು ಉತ್ತರ ಪ್ರದೇಶ ಸರ್ಕಾರ ಮಾಡಬೇಕು. ರಾಜ್ಯದಲ್ಲಿ ಇಂದು ಗೂಂಡಾಗಿರಿ, ಹಗೆತನ ಮತ್ತು ಲೂಟಿ, ಭೂಮಿ-ಸಂಬಂಧಿಸಿ ಘರ್ಷಣೆಗಳು ಇತ್ಯಾದಿ ಘಟನೆಗಳು ಹೆಚ್ಚುತ್ತಿವೆ.
ಹೀಗಾಗಿ ಅಲ್ಲಿನ ಜನತೆ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದೆ. ರಾಜ್ಯ ಅಭಿವೃದ್ಧಿ ಕಾಣಬೇಕಿದ್ದರೆ, ಮೊದಲು ಸರ್ಕಾರ ಅಲ್ಲಿನ ಜನತೆ ಸುರಕ್ಷತೆಯನ್ನು ಒದಗಿಸಬೇಕು. ಆದರೆ, ಅಲ್ಲಿನ ಸರ್ಕಾರ ಜನತೆ ಸುರಕ್ಷತೆಯನ್ನೇ ಒದಗಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ,
ಪ್ರಕರಣದ ಕುರಿತಂತೆ ಉತ್ತರ ಪ್ರದೇಶ ಸರ್ಕಾರ ಗೃಹ ಸಚಿವಾಲಯಕ್ಕೆ ವರದಿ ಸಲ್ಲಿಸಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಪ್ರಕರಣ ಕುರಿತಂತೆ ಯಾವುದೇ ವರದಿಗಳು ಸಚಿವಾಲಯಕ್ಕೆ ನೀಡಿಲ್ಲ. ಆದರೆ, ಈ ಕುರಿತ ವರದಿಯನ್ನು ರಾಜ್ಯ ಸರ್ಕಾರ ಕೇಂದ್ರಕ್ಕೆ ಸಲ್ಲಿಸಬೇಕೆಂದು ಹೇಳಿದ್ದಾರೆ.
ಇದೇ ವೇಳೆ ಕಾಶ್ಮೀರಿ ಪಂಡಿತರ ಸಮಸ್ಯೆ ಕುರಿತಂತೆ ಮಾತನಾಡಿರುವ ಅವರು, ಸಮಸ್ಯೆ ಬಗೆಹರಿಕೆಗಾಗಿ ಕಾಶ್ಮೀರಿ ಪಂಡಿತರಿಗೆ ಭಾರತ ಸರ್ಕಾರ ಪ್ಯಾಕೇಜ್ ವೊಂದನ್ನು ಘೋಷಿಸಿದೆ. ಈ ಬಗೆಗಿನ ಕೆಲಸ ಪ್ರಗತಿಯಲ್ಲಿದೆ. ಕೆಲಸವು ಸಮಸ್ಯೆಗಳು ಎದುರಾಗುತ್ತಿದೆ. ಸಮಸ್ಯೆ ಎಲ್ಲರಿಗೂ ತಿಳಿದಿರುವ ವಿಚಾರ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


