ಕಾಶ್ಮೀರದ ಉಧಂಪುರದಲ್ಲಿ ಸಿಆರ್ಪಿಎಫ್ ಯೋಧರ ಮೇಲೆ ದಾಳಿ, ಓರ್ವ ಉಗ್ರನ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಕುಡ್ ಪ್ರದೇಶದಲ್ಲಿ ಸೋಮವಾರ ಉಗ್ರಗಾಮಿಗಳು ಕೇಂದ್ರೀಯ ಮೀಸಲು ಪೊಲೀಸ್ ಪಡೆ...

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಕುಡ್ ಪ್ರದೇಶದಲ್ಲಿ ಸೋಮವಾರ ಉಗ್ರಗಾಮಿಗಳು ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್ಪಿಎಫ್) ಕ್ಯಾಂಪ್ ಮೇಲೆ ದಾಳಿ ನಡೆಸಿದ್ದಾರೆ.
ಇಂದು ಉಗ್ರರು ಕಾಶ್ಮೀರ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಶ್ರೀನಗರದಿಂದ ಜಮ್ಮುವಿಗೆ ತೆರಳುತ್ತಿದ್ದರು. ಈ ವೇಳೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ತಪಾಸಣೆಗೆ ಮುಂದಾದ ಸಿಆರ್ಪಿಎಫ್ ಯೋಧರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ಧಾರೆ. ಪ್ರತಿ ದಾಳಿ ನಡೆಸಿದ ಯೋಧರು ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆ ಎಂದು ಉಧಂಪುರದ ಎಸ್ಎಸ್ಪಿ ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಭೀಕರ ಗುಂಡಿನ ಕಾಳಗ ನಡೆಯುತ್ತಿದೆ. ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳೂ ಘಟನಾ ಸ್ಥಳದತ್ತ ಹೊರಟಿದ್ದಾರೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


