ಪ್ರಧಾನಿಗೆ ಆಪ್ ಬಗ್ಗೆ ಭೀತಿ: ಸ೦ಸದೀಯ ಕಾರ್ಯದರ್ಶಿ ಮಸೂದೆ ತಿರಸ್ಕಾರದ ನಂತರ ಕೇಜ್ರಿ ಟ್ವೀಟ್
"ಸ೦ಸದೀಯ ಕಾರ್ಯದಶಿ೯ ಮಸೂದೆ"ಗೆ ಅನುಮೋದನೆ ನೀಡುವುದಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿರಸ್ಕರಿಸಿದ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಾರೆ.

ನವದೆಹಲಿ: ಲಾಭದಾಯಕ ಹುದ್ದೆ ಪ್ರಕರಣದಲ್ಲಿ ಸಿಲುಕಿ ಅನಹ೯ತೆ ಭೀತಿ ಎದುರಿಸುತ್ತಿದ್ದ ಆಪ್ ಶಾಸಕರ ರಕ್ಷಣೆಗೆ ಸಿದ್ಧಪಡಿಸಲಾಗಿದೆ ಎಂದು ಆರೋಪಿಸಲಾಗಿದ್ದ ದೆಹಲಿ ಸರ್ಕಾರದ "ಸ೦ಸದೀಯ ಕಾರ್ಯದಶಿ೯ ಮಸೂದೆ"ಗೆ ಅನುಮೋದನೆ ನೀಡುವುದಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿರಸ್ಕರಿಸಿದ ಬೆನ್ನಲ್ಲೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಾರೆ.
ದೆಹಲಿಯಲ್ಲಿ ಒಬ್ಬ ಶಾಸಕನನ್ನು ವಿದ್ಯುತ್ ಗೆ ಸಂಬಂಧಿಸಿದ ಕ್ಷೇತ್ರದ ಬಗ್ಗೆ ಗಮನ ಹರಿಸುವಂತೆ, ನೀರಿನ ವಿಷಯಕ್ಕೆ ಸಂಬಂಧಿಸಿದಂತೆ ಗಮನ ಹರಿಸಲು ಓರ್ವ ಶಾಸಕನನ್ನು, ಶಾಲೆ, ಆಸ್ಪತ್ರೆಗಳಿಗೆ ಸಂಬಂಧಿಸಿದ ವಿಷಯಗಳತ್ತ ಗಮನ ಹರಿಸಲು ಒಬ್ಬೊಬ್ಬ ಶಾಸಕರಿಗೆ ಜವಾಬ್ದಾರಿ ನೀಡಲಾಗಿದೆ. ದೆಹಲಿ ಸರ್ಕಾರದ ಒಳ್ಳೆಯ ಕೆಲಸಗಳನ್ನು ನೋಡಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಯ ಉಂಟಾಗಿದ್ದು ನಾನೂ ಕೆಲಸ ಮಾಡುವುದಿಲ್ಲ, ಬೇರೆಯವರಿಗೆ ಮಾಡುವುದಕ್ಕೂ ಬಿಡುವುದಿಲ್ಲ ಎಂದು ಕೇಜ್ರಿವಾಲ್ ಮೋದಿ ವಿರುದ್ಧ ಟ್ವೀಟರ್ ನಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಸಂಸದೀಯ ಕಾರ್ಯದರ್ಶಿ ಮಸೂದೆಯ ಪ್ರಕಾರ ನೆಮಕವಾಗುತ್ತಿದ್ದ 21 ಸಂಸದೀಯ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಲಿದ್ದ ಶಾಸಕರುಗಳಿಗೆ ಯಾವುದೇ ರೀತಿಯ ಸಂಭಾವನೆ, ಮನೆ, ವಾಹನ ನೀಡಲಾಗುತ್ತಿರಲಿಲ್ಲ ಎಂದು ಕೇಜ್ರಿವಾಲ್ ಸ್ಪಷ್ಟನೆ ನೀಡಿದ್ದಾರೆ. ದೆಹಲಿ ಸರ್ಕಾರ ಮಾಡುತ್ತಿರುವ ಅಭಿವೃದ್ಧಿ ಕೆಲಸಗಳಿಂದ ಆತಂಕಕ್ಕೊಳಗಾಗಿರುವ ಪ್ರಧಾನಿ ನರೇಂದ್ರ ಮೋದಿ ತಾವೂ ಕೆಲಸ ಮಾಡುವುದಿಲ್ಲ, ಮಾಡುವವರಿಗೂ ಅವಕಾಶ ನೀಡುವುದಿಲ್ಲ ಎಂದು ದೆಹಲಿ ಸಿಎಂ ವ್ಯಂಗ್ಯವಾಡಿದ್ದಾರೆ.
ಸಂಸದೀಯ ಕಾರ್ಯದರ್ಶಿ ಸ್ಥಾನವನ್ನು ಲಾಭದಾಯಕ ಹುದ್ದೆಯಿಂದ ಹೊರಗಿಡುವ ದೆಹಲಿ ಸರ್ಕಾರದ ಮಸೂದೆಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ತಿರಸ್ಕರಿಸಿದ್ದು, ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ತೀವ್ರ ಮುಖಭಂಗವಾಗಿದೆ. ದೆಹಲಿ ಸಕಾ೯ರ ರೂಪಿಸಿರುವ "ಸ೦ಸದೀಯ ಕಾರ್ಯದಶಿ೯ ಮಸೂದೆ'ಯನ್ನು ರಾಷ್ಟ್ರಪತಿ ಪ್ರಣಬ್ ಮುಖಜಿ೯ ಸೋಮವಾರ ತಿರಸ್ಕರಿಸಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


