ಫೇಸ್ ಬುಕ್ ನಲ್ಲಿ ಬ್ರಾಹ್ಮಣ ವಿರೋಧಿ ಪೋಸ್ಟ್ ಹಾಕಿದ್ದಕ್ಕೆ ದಲಿತ ಮುಖಂಡನನ್ನು ಉಚ್ಛಾಟಿಸಿದ ಮಾಯಾವತಿ?
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಎಸ್ ಪಿ ಪಕ್ಷ ಬ್ರಾಹ್ಮಣ ಸಮುದಾಯದ ಮತಗಳ ಮೇಲೂ ಕಣ್ಣಿಟ್ಟಿದೆ ಎಂಬುದನ್ನು ಸಾಬೀತುಪಡಿಸುವಂತಹ ಘಟನೆ ನಡೆದಿದೆ.

ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಎಸ್ ಪಿ ಪಕ್ಷ ಬ್ರಾಹ್ಮಣ ಸಮುದಾಯದ ಮತಗಳ ಮೇಲೂ ಕಣ್ಣಿಟ್ಟಿದೆ ಎಂಬುದನ್ನು ಸಾಬೀತುಪಡಿಸುವಂತಹ ಘಟನೆ ನಡೆದಿದೆ.
ಸಾಮಾಜಿಕ ಜಾಲತಾಣದಲ್ಲಿ ಬ್ರಾಹ್ಮಣ ಸಮುದಾಯದ ವಿರುದ್ಧ ಬರೆದಿದ್ದ ದಲಿತ ಮುಖಂಡ ಸಂಜಯ್ ಭಾರ್ತಿ ಎಂಬುವವರನ್ನು ಮಾಯಾವತಿ ಅಮಾನತುಗೊಳಿಸಿದ್ದಾರೆ. ಆದರೆ ತಮ್ಮ ವಿರುದ್ಧ ಕೇಳಿಬಂದಿರುವ ಆರೋಪವನ್ನು ನಿರಾಕರಿಸಿರುವ ಸಂಜಯ್ ಭಾರ್ತಿ ತಾವು ಯಾರ ವಿರುದ್ಧವೂ ಸಾಮಾಜಿಕ ಜಾಲತಾಣದಲ್ಲಿ ಬರೆದಿಲ್ಲ, ನನ್ನ ಫೇಸ್ ಬುಕ್ ಖಾತೆ ಹ್ಯಾಕ್ ಆಗಿದ್ದು ಬೇರೆಯವರು ಬರೆದಿರುವ ಸಾಧ್ಯತೆ ಇದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಪಕ್ಷದ ಸದಸ್ಯರೇ ನನ್ನ ತೇಜೋವಧೆ ಮಾಡಲು ಇಂತಹ ಕೆಲಸ ಮಾಡಿದ್ದಾರೆ ಎಂದು ಭಾರ್ತಿ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


