ಜಮ್ಮುವಿನಲ್ಲಿ ಪ್ರತಿಭಟನೆ: ಮೊಬೈಲ್, ಇಂಟರ್ನೆಟ್ ಸೇವೆ ಸ್ಥಗಿತ
ಮಾನಸಿಕ ಅಸ್ವಸ್ಥನೊಬ್ಬ ಪುರಾತನ ದೇವಸ್ಥಾನವನ್ನು ಅಪವಿತ್ರಗೊಳಿಸಿದ ಎಂಬ ಕಾರಣಕ್ಕೆ ಜಮ್ಮು ನಗರದ ಹಲವು...

ಜಮ್ಮು: ಮಾನಸಿಕ ಅಸ್ವಸ್ಥನೊಬ್ಬ ಪುರಾತನ ದೇವಸ್ಥಾನವನ್ನು ಅಪವಿತ್ರಗೊಳಿಸಿದ ಎಂಬ ಕಾರಣಕ್ಕೆ ಜಮ್ಮು ನಗರದ ಹಲವು ಭಾಗಗಳಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಮೊಬೈಲ್ ಮತ್ತು ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.
ಜಮ್ಮುವಿನ ರೂಪ್ ನಗರ್ ಪ್ರದೇಶದಲ್ಲಿ ಈ ಪುರಾತನ ದೇವಸ್ಥಾನವಿದ್ದು, ಅದು ಅಪವಿತ್ರಗೊಂಡಿದೆ ಎಂದು ನಗರದಾದ್ಯಂತ ಪ್ರತಿಭಟನೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಪರಿಸ್ಥಿತಿ ಸಹಜ ಸ್ಥಿತಿಗೆ ಬರುವವರೆಗೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಜಮ್ಮುವಿನ ಉಪ ಆಯುಕ್ತ ಸಿಮ್ರಂದೀಪ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.
ಕಳೆದ ರಾತ್ರಿಯಿಂದ ಪೊಲೀಸರು ಮತ್ತು ಅಧಿಕಾರಿಗಳು ಪರಿಸ್ಥಿತಿಯ ನಿಗಾವಹಿಸುತ್ತಿದ್ದು, ಹೆಚ್ಚಿನ ಗಲಭೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದರೆ ಇಂದು ಸಂಜೆಯ ಹೊತ್ತಿಗೆ ಸ್ಥಗಿತವನ್ನು ಹಿಂತೆಗೆದುಕೊಳ್ಳಲಾಗುವುದು ಎಂದರು.
ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರತಿಭಟನಾಕಾರರು ಕಳೆದ ರಾತ್ರಿ ಮೂರು ವಾಹನಗಳನ್ನು ಸುಟ್ಟುಹಾಕಿದ್ದು, ದೇವಸ್ಥಾನವನ್ನು ಅಪವಿತ್ರಗೊಳಿಸಲಾಗಿದೆ ಎಂದು ಪೊಲೀಸರೆಡೆಗೆ ಕಲ್ಲು ತೂರಾಟ ನಡೆಸಿದ್ದರು.ದೇವಸ್ಥಾನವನ್ನು ಅಪವಿತ್ರಗೊಳಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


