ವಿವಿಐಪಿ ಕಾಪ್ಟರ್ ಹಗರಣ: ಮಧ್ಯವರ್ತಿ ಮೈಕೆಲ್, ಇತರ ಇಬ್ಬರ ವಿರುದ್ಧ ಚಾರ್ಜ್ ಶೀಟ್ ದಾಖಲು
ಪ್ರಮುಖ ಬೆಳವಣಿಗೆಯೊಂದರಲ್ಲಿ ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಜೇಮ್ಸ್...

Published On :
ನವದೆಹಲಿ: ಪ್ರಮುಖ ಬೆಳವಣಿಗೆಯೊಂದರಲ್ಲಿ ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಜೇಮ್ಸ್ ಹಾಗೂ ಇತರ ಇಬ್ಬರ ವಿರುದ್ಧ ಜಾರಿ ನಿರ್ದೇಶನಾಲಯ ಬುಧವಾರ ಚಾರ್ಜ್ ಶೀಟ್ ದಾಖಲಿಸಿದೆ.
ಮೈಕೆಲ್ ವಿವಿಐಪಿ ಹೆಲಿಕಾಫ್ಟರ್ ಖರೀದಿ ಒಪ್ಪಂದವನ್ನು ಯಶಸ್ವಿಗೊಳಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಮತ್ತು ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ರಕ್ಷಣಾ ಸಚಿವ ಎಕೆ ಆಂಟನಿಯವರನ್ನು ಭೇಟಿ ಮಾಡಿ ಚರ್ಚಿಸಿದ ಆರೋಪ ಎದುರಿಸುತ್ತಿದ್ದಾರೆ.
ಆದರೆ ಈ ಮೂವರಲ್ಲಿ ತಾನೂ ಯಾರನ್ನು ಭೇಟಿ ಮಾಡಿಲ್ಲ ಎಂದಿರುವ ಮೈಕೆಲ್, ದೆಹಲಿಯ ಜಿಮ್ಖಾನಾ ಕ್ಲಬ್‌ನಲ್ಲಿ ಎಸ್.ಪಿ. ತ್ಯಾಗಿ (ಐಎಎಫ್ ಮಾಜಿ ಮುಖ್ಯಸ್ಥ) ಅವರನ್ನು ಒಮ್ಮೆ ಭೇಟಿಯಾಗಿ ಹಸ್ತಲಾಘವ ನೀಡಿದ್ದೆ. ಆದರೆ ಗೈಡೊ ಹಷ್ಕೆ (ಇಟಲಿ ಉದ್ಯಮಿ) ಜತೆ ಸಂಪರ್ಕವಿದ್ದ ಕಾರಣ ಅವರ ಜತೆ ಅಂತರ ಕಾಯ್ದುಕೊಂಡಿದ್ದೆ ಎಂದು ಈ ಹಿಂದೆ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


