ಕಮಲ್ ನಾಥ್ ರಾಜೀನಾಮೆ: ಪಂಜಾಬ್ ಕಾಂಗ್ರೆಸ್ ಉಸ್ತುವಾರಿಯಾಗಿ ಶೀಲಾ ದೀಕ್ಷಿತ್ ನೇಮಕ ಸಾಧ್ಯತೆ
ಪಂಜಾಬ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಕಮಲ್ ನಾಥ್ ರಾಜೀನಾಮೆ ನೀಡಿದ ಬೆನ್ನಲ್ಲೇ ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್ ಅವರನ್ನು ಪಂಜಾಬ್ ನ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ.

ಚಂಡೀಗಢ: ಪಂಜಾಬ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಕಮಲ್ ನಾಥ್ ರಾಜೀನಾಮೆ ನೀಡಿದ ಬೆನ್ನಲ್ಲೇ ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್ ಅವರನ್ನು ಪಂಜಾಬ್ ನ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ.
ಶೀಲಾ ದೀಕ್ಷಿತ್ ಅವರನ್ನು ಪಂಜಾಬ್ ನ ಉಸ್ತುವಾರಿಯನ್ನಾಗಿ ನೇಮಕ ಮಾಡುವ ಬಗ್ಗೆ ಕಾಂಗ್ರೆಸ್ ಈ ವರೆಗೂ ಅಧಿಕೃತವಾಗಿ ಮಾಹಿತಿ ನೀಡಿಲ್ಲ. ಶೀಲಾ ದೀಕ್ಷಿತ್ ದೆಹಲಿ ಸಿಎಂ ಆಗಿದ್ದರಾದರೂ ಅವರು ಹುಟ್ಟಿದ್ದು ಪಂಜಾಬ್ ನಲ್ಲಿ. ದೆಹಲಿ ಸಿಎಂ ಸ್ಥಾನ ಕಳೆದುಕೊಂಡ ನಂತರ ಅಂದಿನ ಯುಪಿಎ ಸರ್ಕಾರ ಶೀಲಾ ದೀಕ್ಷಿತ್ ಅವರನ್ನು ಕೇರಳ ರಾಜ್ಯಪಾಲರನ್ನಾಗಿ ನೇಮಕ ಮಾಡಿತ್ತು. ತಾವು ಪಂಜಾಬ್ ಉಸ್ತುವಾರಿಯಾದ ನಂತರ ಸಿಖ್-ವಿರೋಧಿ ಹತ್ಯಾಕಾಂಡವನ್ನು ಮುಂದಿಟ್ಟುಕೊಂಡು ಅನಾವಶ್ಯಕ ವಿವಾದ ಉಂಟುಮಾಡಲಾಗುತ್ತಿದೆ ಎಂದು ಕಾರಣ ನೀಡಿ ಕಮಲ್ ನಾಥ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿಖ್ ವಿರೋಧಿ ದಂಗೆಯಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಕಮಲ್ ನಾಥ್ ಅವರನ್ನು ಪಂಜಾಬ್ ಕಾಂಗ್ರೆಸ್ ನ ಉಸ್ತುವಾರಿಯನ್ನಾಗಿ ನೇಮಿಸಿದ್ದಕ್ಕೆ ಆಮ್ ಆದ್ಮಿ ಪಕ್ಷ, ಅಕಾಲಿದಳ ಮಾತ್ರವಷ್ಟೇ ಅಲ್ಲದೇ ಕಾಂಗ್ರೆಸ್ ನಲ್ಲಿಯೂ ಹಲವರು ವಿರೋಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


