ಕಮಲ್ ನಾಥ್ ರಾಜೀನಾಮೆ 1984 ಗಲಭೆಯಲ್ಲಿ ಕಾಂಗ್ರೆಸ್ ಭಾಗಿಯನ್ನು ನಿರೂಪಿಸುತ್ತದೆ: ರಿಜಿಜು
ಕಮಲ್ ನಾಥ್ ಅವರು ರಾಜೀನಾಮೆ ನೀಡಿರುವುದು ನೋಡಿದರೆ, 1984ರ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ಭಾಗಿಯಾಗಿರುವುದನ್ನು ನಿರೂಪಿಸುತ್ತದೆ...

ಮುಂಬೈ: ಕಮಲ್ ನಾಥ್ಅವರು ರಾಜೀನಾಮೆ ನೀಡಿರುವುದು ನೋಡಿದರೆ, 1984ರ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ಭಾಗಿಯಾಗಿರುವುದನ್ನು ನಿರೂಪಿಸುತ್ತಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು ಗುರುವಾರ ಹೇಳಿದ್ದಾರೆ.
ಪಂಜಾಬ್ ರಾಜ್ಯ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಕಮಲ್ ನಾಥ್ ಅವರು ರಾಜೀನಾಮೆ ಸಲ್ಲಿಸಿರುವ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಕಮಲ್ ನಾಥ್ ಅವರು ರಾಜೀನಾಮೆ ಸಲ್ಲಿಸಿರುವ ವಿಚಾರ ಈಗಷ್ಟೇ ತಿಳಿಯಿತು. ಕಾಂಗ್ರೆಸ್ ಇದೀಗ ತನ್ನ ತಪ್ಪಿನ ಅರಿವಾದಂತಿದೆ. ಕಮಲ್ ನಾಥ್ ಅವರ ರಾಜೀನಾಮೆ ಪತ್ರದಿಂದ 1984ರಲ್ಲಿ ಸಿಖ್ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಭಾಗಿಯಾಗಿರುವುದು ಎದ್ದು ಕಾಣುತ್ತಿದೆ ಎಂದು ಹೇಳಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ಕಾಂಗ್ರೆಸ್ ಹೈ ಕಮಾಂಡ್ ಪಂಜಾಬ್, ಹರಿಯಾಣ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿ ಕಮಲ್ ನಾಥ್ ಅವರನ್ನು ಆಯ್ಕೆ ಮಾಡಿತ್ತು. ಆದರೆ, ಕಮಲ್ ನಾಥ್ ಆಯ್ಕೆಗೆ ಪಕ್ಷದಲ್ಲಿಯೇ ಅಸಮಧಾನ ವ್ಯಕ್ತವಾಗಿತ್ತು.
ಅಲ್ಲದೆ, ಸಿಖ್ ಗಲಭೆ ವೇಳೆ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರ ಆದೇಶವನ್ನು ಪಾಲಿಸಿದ್ದಕ್ಕಾಗಿ ಕಮಲ್ ನಾಥ್ ಅವರಿಗೆ ಕಾಂಗ್ರೆಸ್ ಪಕ್ಷ ಪಂಜಾಬ್ ನ ಕಾಂಗ್ರೆಸ್ ಉಸ್ತುವಾರಿ ನೀಡುವ ಮೂಲಕ ಕಮಲ್ ನಾಥ್ ಅವನ್ನು ಪುರಸ್ಕರಿಸಿದೆ ಎಂದು ಆಪ್ ನಾಯಕರು ಆರೋಪಿಸಿದ್ದರು.
ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ಇಂದು ಕಮಲ್ ನಾಥ್ ಅವರು ಪಂಜಾಬ್ ಚುನಾವಣೆ ಪ್ರಚಾರ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


