ಸಿಂಹದ ಜೊತೆ ರವೀಂದ್ರ ಜಡೇಜಾ ಫೋಟೋ ವೈರಲ್ : ತನಿಖೆಗೆ ಆದೇಶ
ಕ್ರಿಕೆಟಿಗ ರವೀಂದ್ರ ಜಡೇಜಾ ಗುಜರಾತ್ನ ಗಿರ್ ರಾಷ್ಟ್ರೀಯ ಅಭಯಾರಣ್ಯದಲ್ಲಿ ಸಿಂಹಗಳ ಮುಂದೆ ತೆಗೆದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ..

ರಾಜ್ಕೋಟ್: ಕ್ರಿಕೆಟಿಗ ರವೀಂದ್ರ ಜಡೇಜಾ ಗುಜರಾತ್ನ ಗಿರ್ ರಾಷ್ಟ್ರೀಯ ಅಭಯಾರಣ್ಯದಲ್ಲಿ ಸಿಂಹಗಳ ಮುಂದೆ ತೆಗೆದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ತುತಿದ್ದಂತೆಯೇ ಈ ಬಗ್ಗೆ ತನಿಖೆ ನಡೆಸುವಂತೆ ಗುಜರಾತ್ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
ರವೀಂದ್ರ ಜಡೇಜಾ ಗಿರ್ ರಾಷ್ಟ್ರೀಯ ಅಭಯಾರಣ್ಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ವಾಹನದಿಂದ ಕೆಳಗಿಳಿದ ಜಡೇಜಾ ಮತ್ತು ಅವರ ಪತ್ನಿ ಸಿಂಹಗಳ ಮುಂದೆ ಫೋಟೋ ತೆಗೆಸಿದ್ದಾರೆ. ಇದಲ್ಲದೆ ಅಲ್ಲಿನ ಅರಣ್ಯ ಸಿಬ್ಬಂದಿಯೊಡನೆ ಸೆಲ್ಪಿ ತೆಗೆದುಕೊಂಡಿದ್ದರು. ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಹೀಗಾಗಿ ಇಲಾಖೆ ತನಿಖೆಗೆ ಆದೇಶ ಹೊರಡಿಸಿದೆ.
ಗಿರ್ ರಾಷ್ಟ್ರೀಯ ಅಭಯಾರಣ್ಯದಲ್ಲಿ ಪ್ರವಾಸಿಗರು ವಾಹನದಿಂದ ಕೆಳಗಿಳಿಯುವಂತಿಲ್ಲ. ಆದರೆ ಪೋಟೋಗಳಲ್ಲಿ ಜಡೇಜಾ ಅವರು ವಾಹನದಿಂದ ಕೆಳಗಿಳಿದು ಸಿಂಹಗಳ ಮುಂದೆ ಫೋಟೋ ತೆಗೆಸಿದ್ದು ಸ್ಪಷ್ಟವಾಗಿದೆ. ಇನ್ನೂ ಮಳೆಗಾಲವಾಗಿರುವುದರಿಂದ 4 ತಿಂಗಳು ಅರಣ್ಯಧಾಮ ಕ್ಲೋಸ್ ಆಗಿರುತ್ತದೆ. ಮತ್ತೆ ಅಕ್ಟೋಬರ್ 15 ಕ್ಕೆ ತೆರೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


