ದೇಶ

ಐಪಿಎಸ್ ಅಧಿಕಾರಿ ಶಶಿಕುಮಾರ್ ನಿಗೂಢ ಸಾವು: ಡೆತ್ ನೋಟ್ ನಿಂದ ಪ್ರಕರಣಕ್ಕೆ ಹೊಸ ಟ್ವಿಸ್ಟ್

ಆಂಧ್ರ ಪ್ರದೇಶ ಐಪಿಎಸ್ ಅಧಿಕಾರಿ ಶಸಿ ಕುಮಾರ್ ಅವರ ಸಾವಿನ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಶಸಿ ಕುಮಾರ್ ಅವರ ಶವದ ಬಳಿ ಡೆತ್ ನೋಟ್...

ಐಪಿಎಸ್ ಅಧಿಕಾರಿ ಶಶಿಕುಮಾರ್ ನಿಗೂಢ ಸಾವು: ಡೆತ್ ನೋಟ್ ನಿಂದ ಪ್ರಕರಣಕ್ಕೆ ಹೊಸ ಟ್ವಿಸ್ಟ್
ಶಸಿಕುಮಾರ್
Published On :

ವಿಶಾಖಪಟ್ಟಣಂ; ಆಂಧ್ರ ಪ್ರದೇಶ ಐಪಿಎಸ್ ಅಧಿಕಾರಿ ಶಸಿ ಕುಮಾರ್ ಅವರ ಸಾವಿನ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಶಸಿ ಕುಮಾರ್ ಅವರ ಶವದ ಬಳಿ ಡೆತ್ ನೋಟ್ ಸಿಕ್ಕಿದ್ದು, ಖಿನ್ನತೆಗೊಳಗಾಗಿ ತಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆದರೆ ಡೆತ್ ನೋಟ್ ಬಗ್ಗೆ ವಿವರವಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಯಾವುದೇ ಮಾಹಿತಿ ನೀಡಿಲ್ಲ.

ಇನ್ನೂ ಡೆತ್ ನೋಟನ್ನು ವಶಕ್ಕೆ ಪಡೆದುಕೊಂಡಿರುವ ಸಿಐಡಿ ಪೊಲೀಸರು ಪಿಸ್ತೂಲು, ಅದರ ಮೇಲಿರುವ ಫಿಂಗರ್ ಪ್ರಿಂಟ್ಸ್ ಪರೀಕ್ಷೆಗೆ ಕಳುಹಿಸಿದ್ದಾರೆ. ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ.

ಶಸಿಕುಮಾರ್ ಬರೆದಿರುವ ಡೆತ್ ನೋಟ್ ನಲ್ಲಿ ಕೇವಲ ಒಂದೇ ಒಂದು ಸಾಲು ಇದೆ. ಅದರಲ್ಲಿ ಯಾರನ್ನು ಅವರು ದೂರಿಲ್ಲ. ತಮ್ಮ ವೃತ್ತಿ ಜೀವನವನ್ನು ಯಶಸ್ವಿಯಾದಿ ನಿರ್ವಹಿಸಲು ಸಾಧ್ಯವಾಗದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನೂ ಸಿಐಡಿ ಅಧಿಕಾರಿಗಳ ತಂಡ ಶಸಿಕುಮಾರ್ ಅವರ ಫೋನ್ ಕಾಲ್ ರೆಕಾರ್ಡ್ ಗಳನ್ನು ಪರಿಶೀಲನೆ ನಡೆಸಿದ್ದಾರೆ. ಮುಂಚಿಗಪಟ್ಟು ಪ್ರದೇಶದ ದೂಳಿಪಟ್ಟುವಿನಲ್ಲಿ ನಡೆದ ಸ್ಫೋಟದಲ್ಲಿ ಸಿಆರ್ಪಿಎಫ್ ಜವಾನ ಸಾವನ್ನಪ್ಪಿದ್ದರು. ಜೊತೆಗೆ ಕಳ್ಳಸಾಗಣೆದೊರನೊಬ್ಬ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸುವ ವೇಳೆ ಸಾವನ್ನಪ್ಪಿದ್ದ ಪ್ರಕರಣಗಳ ಸಂಬಂಧ ಪಡೇರುವಿನಲ್ಲಿ ಅಸಿಸ್ಟೆಂಟ್ ಪೊಲೀಸ್ ಕಮಿಷನರ್ ಆಗಿದ್ದ ಶಸಿಕುಮಾರ್ ಅವರನ್ನು ಹಿರಿಯ ಅಧಿಕಾರಿಗಳು ನಿಂದಿಸಿದ್ದರು ಎಂದು ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ನೊಂದು ಶಸಿಕುಮಾರ್ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದರು ಎನ್ನಲಾಗಿದೆ.

ಇನ್ನೂ ಶಸಿ ಕುಮಾರ್ ಅವರ ಖಾಸಗಿ ಡೈರಿಯನ್ನು ವಶಕ್ಕೆ ಪಡೆದುಕೊಂಡಿರುವ ಸಿಐಡಿ ಪೊಲೀಸರು, ಸಂಬಂಧಪಟ್ಟವರನ್ನೆಲ್ಲಾ ವಿಚಾರಣೆಗೊಳಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.