ಕಸ್ಟಮ್ಸ್ ಗೋದಾಮಿನಿಂದಲೇ ಚಿನ್ನ ಕಳವು, ಅಸಲಿ ಬದಲಿಗೆ ನಕಲಿ ಗಟ್ಟಿಗಳನ್ನಿಟ್ಟ ಕದೀಮರು
ದೆಹಲಿ ವಿಮಾನ ನಿಲ್ದಾಣದಲ್ಲಿ 27 ವರ್ಷಗಳ ಹಿಂದೆ ವಶ ಪಡಿಸಿಕೊಳ್ಳಲಾಗಿದ್ದ ಅಕ್ರಮ ಚಿನ್ನದ ಆಭರಣಗಳನ್ನು ಕಸ್ಟಮ್ಸ್ನ ಗೋದಾಮಿನಿಂದ ನಾಪತ್ತೆಯಾಗಿರುವ ಘಟನೆ ನಡೆದಿದೆ.

ನವದೆಹಲಿ: ದೆಹಲಿ ವಿಮಾನ ನಿಲ್ದಾಣದಲ್ಲಿ 27 ವರ್ಷಗಳ ಹಿಂದೆ ವಶ ಪಡಿಸಿಕೊಳ್ಳಲಾಗಿದ್ದ ಅಕ್ರಮ ಚಿನ್ನದ ಆಭರಣಗಳನ್ನು ಕಸ್ಟಮ್ಸ್ನ ಗೋದಾಮಿನಿಂದ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಕಸ್ಟಮ್ಸ್ ಅಧಿಕಾರಿಗಳು ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಚಿನ್ನವನ್ನು ಇಲಾಖೆಯ ನಿಲ್ದಾಣದಲ್ಲಿರುವ ಗೋದಾಮಿನಲ್ಲಿರಿಸಿದ್ದು, ಇದರ ಸಾಮಾನ್ಯ ತಪಾಸಣೆ ನಡೆಸುವಾಗ ಕೆಲವೊಂದು ಚಿನ್ನದ ಆಭರಣಗಳು ನಾಪತ್ತೆಯಾಗಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ವಶಪಡಿಸಿಕೊಂಡಿದ್ದ ಚಿನ್ನದ ಬದಲಾಗಿ ನಕಲಿ ಚಿನ್ನ ಮತ್ತು ಲೋಹದ ಗಟ್ಟಿಯನ್ನು ಅದರ ಸ್ಥಳದಲ್ಲಿಟ್ಟು, ಅಸಲಿ ಚಿನ್ನದ ಆಭರಣ ಮತ್ತು ಚಿನ್ನದ ಗಟ್ಟಿಗಳನ್ನು ಕಳವು ಮಾಡಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕಸ್ಟಮ್ಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಅಲ್ಲಿನ ಉದ್ಯೋಗಿಗಳೇ ಅಸಲಿ ಚಿನ್ನದ ಬದಲಿಗೆ ನಕಲಿ ಚಿನ್ನವನ್ನು ಬದಲಾಯಿಸಿರುವ ಶಂಕೆ ವ್ಯಕ್ತವಾಗಿದೆ. 1989ರಲ್ಲಿ ಈ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದ್ದು, ಕಾಣೆಯಾಗಿರುವ ಚಿನ್ನದ ಮೊತ್ತ 27 ಲಕ್ಷ ರು. ಎಂದು ಅಂದಾಜಿಸಲಾಗಿದೆ. ಎಂದಿರುವ ಅಧಿಕಾರಿಗಳು ಈ ಬಗ್ಗೆ ಜೂನ್ 15ರಂದೇ ಎಫ್ಐಆರ್ ದಾಖಲಿಸಿದ್ದಾರೆ. ಅಲ್ಲದೆ ಕಳೆದ ಮೂರು ವರ್ಷಗಳಲ್ಲಿ ಚಿನ್ನ ಕಳ್ಳಸಾಗಣೆ ಪ್ರಕರಣಗಳಲ್ಲಿಶೇ.10 ಹೆಚ್ಚಳವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


