ದೇಶ

ಬೇಡಿಕೆ ಈಡೇರಿಕೆಗೆ ಸರ್ಕಾರ ಅಸ್ತು: ಜಾಟ್ ಪ್ರತಿಭಟನೆ ಅಂತ್ಯ

ಜಾಟ್ ಸಮುದಾಯದ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಹರಿಯಾಣ ಸರ್ಕಾರ ಭರವಸೆ ನೀಡಿದ್ದು, ಇದೀಗ ಪ್ರತಿಭಟನಾ ಸಂಘಟನೆಗಳು ತಮ್ಮ ಪ್ರತಿಭಟನೆಯನ್ನು...

ಬೇಡಿಕೆ ಈಡೇರಿಕೆಗೆ ಸರ್ಕಾರ ಅಸ್ತು: ಜಾಟ್ ಪ್ರತಿಭಟನೆ ಅಂತ್ಯ
ಜಾಟ್ ಪ್ರತಿಭಟನೆ (ಸಂಗ್ರಹ ಚಿತ್ರ)
Published On :

ಹರಿಯಾಣ: ಜಾಟ್ ಸಮುದಾಯದ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಹರಿಯಾಣ ಸರ್ಕಾರ ಭರವಸೆ ನೀಡಿದ್ದು, ಇದೀಗ ಪ್ರತಿಭಟನಾ ಸಂಘಟನೆಗಳು ತಮ್ಮ ಪ್ರತಿಭಟನೆಯನ್ನು ಭಾನುವಾರ ಅಂತ್ಯಗೊಳಿಸಿದ್ದಾರೆ.

ಜಾಟ್ ಸಮುದಾಯ ಸಂಘಟನೆಗಳು ನೀಡಿದ್ದ ಪ್ರತಿಭಟನಾ ಕರೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಹರಿಯಾಣ ಸರ್ಕಾರ ನಿನ್ನೆಯಷ್ಟೇ ಜಾಟ್ ಸಮಿತಿ ಅಧ್ಯಕ್ಷ ಯಶ್ಪಾಲ್ ಮಲಿಕ್ ಅವರೊಂದಿಗೆ ದೆಹಲಿಯಲ್ಲಿ ಮಾತುಕತೆ ನಡೆಸಿದ್ದರು.

ಮಾತುಕತೆ ವೇಳೆ ಹರಿಯಾಣ ಸಚಿವ ಕೃಷ್ಣನ್ ಲಾಲ್ ಪಾನ್ವಾರ್ ಅವರು ಸಮುದಾಯ ಮುಂದಿಟ್ಟಿದ್ದ ಸಾಕಷ್ಟು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರು. ಹೀಗಾಗಿ ಸಮುದಾಯ ತನ್ನ ಪ್ರತಿಭಟನೆಯನ್ನು ಹಿಂಪಡೆದಿದೆ ಎಂದು ತಿಳಿದುಬಂದಿದೆ.
    
ಈ ಕುರಿತಂತೆ ಮಾತನಾಡಿರುವ ಯಶ್ಪಾಲ್ ಮಲಿಕ್ ಅವರು, ಜಾಟ್ ಸಮುದಾಯ ಬೇಡಿಕೆಗಳನ್ನು ಆಗಸ್ಟ್ 31ರೊಳಗಾಗಿ ಈಡೇರಿಸುವಂತೆ ಸರ್ಕಾರಕ್ಕೆ ಗಡಿ ನೀಡಲಾಗಿದೆ. ನಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಕೂಡ ಭರವಸೆ ನೀಡಿದೆ. ಹೀಗಾಗಿ ನಮ್ಮ ಪ್ರತಿಭಟನೆಯನ್ನು ಹಿಂಪಡೆಯಲಾಗುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.