ಯೋಗ ದಿನಾಚರಣೆಯಿಂದ ಅಂತರ ಕಾಯ್ದುಕೊಂಡ ಬಿಹಾರ ಸರ್ಕಾರ!
ವಿಶ್ವಾದ್ಯಂತ ಪಕ್ಷಭೇದ ವನ್ನು ಮರೆತು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆದಿದ್ದರೆ, ಬಿಹಾರದಲ್ಲಿ ಮಾತ್ರ ರಾಜಕೀಯ ಕಾರಣಗಳಿಗಾಗಿ ಯೋಗ ದಿನಾಚರಣೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗಿಲ್ಲ

ಪಾಟ್ನಾ: ವಿಶ್ವಾದ್ಯಂತ ಪಕ್ಷಭೇದ ವನ್ನು ಮರೆತು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆದಿದ್ದರೆ, ಬಿಹಾರದಲ್ಲಿ ಮಾತ್ರ ರಾಜಕೀಯ ಕಾರಣಗಳಿಗಾಗಿ ಯೋಗ ದಿನಾಚರಣೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗಿಲ್ಲ ಎಂಬ ವರದಿಗಳು ಪ್ರಕಟವಾಗಿದೆ.
ಬಿಹಾರದಲ್ಲಿ ಪಂತಂಜಲಿ ಯೋಗಪೀಠ ಹಾಗೂ ಬಾಬಾ ರಾಮ್ ದೇವ್ ಅವರ ಸಂಘಟನೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗಾಗಿ ಗಾಂಧಿ ಮೈದಾನದಲ್ಲಿ ಸಿದ್ಧತೆ ನಡೆಸಿ, ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಡಳಿತ ಹಾಗೂ ವಿರೋಧ ಪಕ್ಷದ ಹಲವು ರಾಜಕೀಯ ಮುಖಂಡರನ್ನು ಆಹ್ವಾನಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಬಿಜೆಪಿಯ ಮುಖಂಡರನ್ನು ಆಹ್ವಾನಿಸಿದ್ದರ ಪರಿಣಾಮ ಕಾರ್ಯಕ್ರಮಕ್ಕೆ ಸರ್ಕಾರದ ಸಚಿವರು, ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಗೈರು ಹಾಜರಾಗಿದ್ದಾರೆ.
ಬಿಹಾರದಲ್ಲಿ ಆಯೋಜಿಸಲಾಗಿದ್ದ ಯೋಗ ದಿನಾಚರಣೆಯಲ್ಲಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಬಿಜೆಪಿ ನಾಯಕರಾದ ಪ್ರೇಮ್ ಕುಮಾರ್, ಬಿಹಾರ ವಿಧಾನಸಭೆಯ ಪ್ರತಿಪಕ್ಷ ನಾಯಕ ನಿತಿನ್ ನವೀನ್, ಸಂಜೀವ್, ಅರುಣ್ ಕುಮಾರ್ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಆಹ್ವಾನಿತರಾಗಿದ್ದ ಬಿಹಾರದ ಸಚಿವರು ಗೈರು ಹಾಜರಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ, ಪರೋಕ್ಷವಾಗಿ ವಾಗ್ದಾಳಿ ನಡೆಸಿರುವ ರವಿಶಂಕರ್ ಪ್ರಸಾದ್, ಯೋಗ ಎಲ್ಲರನ್ನೂ ಒಗ್ಗೂಡಿಸುತ್ತದೆಯೇ ಹೊರತು ವಿಭಾಜಿಸುವುದಿಲ್ಲ. ಯೋಗ ರಾಜಕೀಯದಿಂದ ಹೊರತಾದದ್ದು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


