ಯೋಗವನ್ನು ಜೀವನದ ಅವಿಭಾಜ್ಯ ಅಂಗವಾಗಿಸಿಕೊಳ್ಳಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮಾತನಾಡಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಯೋಗವನ್ನು ಜೀವನದ ಅವಿಭಾಜ್ಯ ಅಂಗವಾಗಿಸಿಕೊಳ್ಳಿ ಎಂದು ಕರೆ ನೀಡಿದ್ದಾರೆ.

ನವದೆಹಲಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮಾತನಾಡಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಯೋಗವನ್ನು ಜೀವನದ ಅವಿಭಾಜ್ಯ ಅಂಗವಾಗಿಸಿಕೊಳ್ಳಿ ಎಂದು ಕರೆ ನೀಡಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ಎರಡನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನವನ್ನು ಉದ್ಘಾಟಿಸಿ, ಸುಮಾರು 1,000 ಜನರೊಂದಿಗೆ ಯೋಗಭ್ಯಾಸ ಮಾಡಿದ ಪ್ರಣಬ್ ಮುಖರ್ಜಿ, ಯೋಗದಿಂದ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಹೇಳಿದ್ದಾರೆ.
ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯಕರ ಜೀವನ ಸಾಗಿಸಲು ಸಾಧ್ಯವಾಗುತ್ತದೆ. ಆದ್ದರಿಂದ ಯೋಗವನ್ನು ಜೀವನದ ಅವಿಭಾಜ್ಯ ಅಂಗವಾಗಿಸಬೇಕು. ಮನಸ್ಸು ಹಾಗೂ ದೇಹದ ಸ್ವಾಸ್ಥ್ಯಕ್ಕೆ ಯೋಗ ಪರಿಣಾಮಕಾರಿಯಾಗಿದ್ದು, ಪ್ರತಿಯೊಬ್ಬರೂ ಯೋಗಾಭ್ಯಾಸ ಮಾಡಬೇಕು ಎಂದು ಪ್ರಣಬ್ ಮುಖರ್ಜಿ ಕರೆ ನೀಡಿದ್ದಾರೆ.
ಜೂ.21 ರಂದು ವಿಶ್ವಾದ್ಯಂತ ಯೋಗದಿನಾಚರಣೆ ನಡೆಯುತ್ತಿದ್ದು, ಚಂಡೀಘಡದ ಕ್ಯಾಪಿಟಲ್ ಕಾಂಪ್ಲೆಕ್ಸ್ ಮೈದಾನದಲ್ಲಿ ಕಿಕ್ಕಿರಿದು ತುಂಬಿದ್ದ ಜನಸ್ತೋಮದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಯೋಗಾಭ್ಯಾಸ ಮಾಡುವ ಮೂಲಕ 2ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


