ದೇಶ

ಮಧ್ಯಪ್ರದೇಶ: ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ಸ್ಮೃತಿ ಇರಾನಿ

ಪ್ರಾಚೀನ ಭಾರತ ಮತ್ತು ಆಧುನಿಕ ಯುಗದ ನಡುವೆ ಸೇತುವೆಯಾಗಿ ಈ ಯೋಗ ದಿನ ಕೆಲಸ ಮಾಡುತ್ತದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ...

ಮಧ್ಯಪ್ರದೇಶ: ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ಸ್ಮೃತಿ ಇರಾನಿ
ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸ್ಮೃತಿ ಇರಾನಿ
Published On :

ಭೂಪಾಲ್: ಪ್ರಾಚೀನ ಭಾರತ ಮತ್ತು ಆಧುನಿಕ ಯುಗದ ನಡುವೆ ಸೇತುವೆಯಾಗಿ ಈ ಯೋಗ ದಿನ ಕೆಲಸ ಮಾಡುತ್ತದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅಭಿಪ್ರಾಯ ಪಟ್ಟಿದ್ದಾರೆ.

ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಭೂಪಾಲ್ ನ ಲಾಲ್ ಪರೇಡ್ ಮೈದಾನದಲ್ಲಿ ನಡೆದ ಯೋಗ ದಿನದ ಕಾರ್ಯಕ್ರಮದಲ್ಲಿ  ಮಾತನಾಡಿದ  ಸ್ಮೃತಿ ಇರಾನಿ, ಭೂಪಾಲ್ ನಲ್ಲಿ ನಾನು ನೂರಾರು ಮಂದಿ ಯೋಗ ಉತ್ಸಾಹಿಗಳನ್ನು ನೋಡಿದೆ ಎಂದು ಹೇಳಿದರು.

ಈ ವೇಳೆ  ಪ್ರಧಾನಿ ಮೋದಿಯವರ ಸಾಧನೆಯನ್ನು ಕೊಂಡಾಡಿದ ಅವರು ಈ ವಿಶೇಷ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ ಮಧ್ಯಪ್ರದೇಶ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು.

ಕಾಲು ಮುರಿದಿದ್ದರೂ ಸಹ ರಾಜ್ಯ ಗೃಹ ಸಚಿವ ಬಾಬುಲಾಲ್ ಗೌರ್ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿ ಗಮನ ಸೆಳೆದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾನು ಪ್ರತಿದಿನ ಭಗವದ್ಗೀತೆಯನ್ನು ಓದುತ್ತೇನೆ ಮತ್ತು ಯೋಗಾ ಮಾಡುತ್ತೇನೆ. ಇವೆರಡು ನನ್ನ ದಿನನಿತ್ಯದ ಅಭ್ಯಾಸಗಳು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.