"ಮದರ್ ತೆರೆಸಾ" ಕ್ರೈಸ್ತ ಮತಾಂತರ ಜಾಲದ ಭಾಗ; ಯೋಗಿ ಅದಿತ್ಯಾನಾಥ್ ವಿವಾದಾತ್ಮಕ ಹೇಳಿಕೆ
ನೊಬೆಲ್ ಪುರಸ್ಕೃತೆ ಮದರ್ ತೆರೆಸಾ ವಿರುದ್ಧ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅವರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ಮದರ್ ತೆರಸಾ...

ಬಸ್ತಿ: ನೊಬೆಲ್ ಪುರಸ್ಕೃತೆ ಮದರ್ ತೆರೆಸಾ ವಿರುದ್ಧ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅವರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ಮದರ್ ತೆರಸಾ ಭಾರತವನ್ನು ಕ್ರೈಸ್ತ ಧರ್ಮಕ್ಕೆ ಪರಿವರ್ತಿಸುವ ಜಾಲದ ಒಂದು ಭಾಗವಾಗಿದ್ದರು ಎಂದು ಆರೋಪಿಸಿದ್ದಾರೆ.
ಬಸ್ತಿಯಲ್ಲಿ ನಡೆದ ರಾಮ ಕಥಾ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಈಶಾನ್ಯ ರಾಜ್ಯಗಳಾದ ಅರುಣಾಚಲಪ್ರದೇಶ, ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ಗಳಲ್ಲಿ ಮತಾಂತರದಿಂದ ಪ್ರತ್ಯೇಕತಾ ಚಳುವಳಿಗಳು ಪ್ರಾರಂಭವಾಗಿವೆ.
ಭಾರತದ ಈಶಾನ್ಯ ಭಾಗದಲ್ಲಿನ ಪರಿಸ್ಥಿತಿಯ ಬಗ್ಗೆ ಎಷ್ಟೋ ಜನರಿಗೆ ತಿಳಿದಿಲ್ಲ. ಒಮ್ಮೆ ಇಲ್ಲಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಕಣ್ಣಾರೆ ನೋಡಿ, ಅರ್ಥ ಮಾಡಿಕೊಳ್ಳಬೇಕಿದೆ ಎಂದಿದ್ದಾರೆ.
ಈ ಹಿಂದೆ ಕೂಡ ಆರ್ ಎಸ್ಎಸ್ ಮುಖಂಡ ಮೋಹನ್ ಭಾಗವತ್ ಕೂಡ ಮದರ್ ತೆರೆಸಾ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದರು, ಮದರ್ ತೆರೆಸಾ ಅವರು ಬಡವರಿಗೆ ಸೇವೆ ನೀಡುವುದರ ಹಿಂದೆ ಅವರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುವ ಉದ್ದೇಶವಿಟ್ಟುಕೊಂಡಿದ್ದರು ಎಂದು ಆರೋಸಿದ್ದರು. ಇದೀರ ಯೋಗಿ ಆದಿತ್ಯನಾಥ್ ಅವರು ನೀಡಿರುವ ಹೇಳಿಕೆ ಮತ್ತೆ ಹೊಸ ವಿವಾದ ಸೃಷ್ಟಿಸಿದಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


