ಅಂಬರೀಷ್-ಶ್ರೀನಿವಾಸ್ ಪ್ರಸಾದ್ ಭೇಟಿ: ಅತೃಪ್ತ ಶಾಸಕರಿಗೆ ನಾಯಕತ್ವ?
ಸಚಿವ ಸಂಪುಟದಿಂದ ಕೈಬಿಟ್ಟ ಹಿನ್ನೆಲೆಯಲ್ಲಿ ತೀವ್ರ ಬೇಸರಗೊಂಡಿರುವ ಹಿರಿಯ ದಲಿತ ನಾಯಕ ಶ್ರೀನಿವಾಸಪ್ರಸಾದ್ ಹಾಗೂ ಒಕ್ಕಲಿಗರ ನಾಯಕ ಅಂಬರೀಶ್ ...

ಬೆಂಗಳೂರು: ಸಚಿವ ಸಂಪುಟದಿಂದ ಕೈಬಿಟ್ಟ ಹಿನ್ನೆಲೆಯಲ್ಲಿ ತೀವ್ರ ಬೇಸರಗೊಂಡಿರುವ ಹಿರಿಯ ದಲಿತ ನಾಯಕ ಶ್ರೀನಿವಾಸಪ್ರಸಾದ್ ಹಾಗೂ ಒಕ್ಕಲಿಗರ ನಾಯಕ ಅಂಬರೀಶ್ ಅವರು ಬುಧವಾರ ಭೇಟಿ ಮಾಡಿ ಮಾತುಕತೆ ನಡೆಸಲಿದ್ದು, ಇದಾದ ನಂತರ ಸಂಜೆಯ ವೇಳೆಗೆ ಕಾಂಗ್ರೆಸ್ ಅತೃಪ್ತ ಶಾಸಕರ ಸಭೆ ನಡೆಸುವ ಸಾಧ್ಯತೆಯಿದೆ.
ಅಂಬರೀಶ್ ಅವರನ್ನು ಭೇಟಿ ಮಾಡಲು ಮೈಸೂರಿನಿಂದ ನಗರಕ್ಕೆ ಆಗಮಿಸಲಿರುವ ಶ್ರೀನಿವಾಸ ಪ್ರಸಾದ್ ಅವರು ಬುಧವಾರ ಬೆಳಗ್ಗೆ ಭೇಟಿ ಮಾಡಲಿದ್ದಾರೆ. ಈ ಭೇಟಿಯ ನಂತರ ಅತೃಪ್ತ ಶಾಸಕರ ಮುಂದಿನ ಕಾರ್ಯಯೋಜನೆ ರೂಪುಗೊಳ್ಳಲಿದೆ. ಒಂದು ವೇಳೆ ಈ ನಾಯಕರು ಅತೃಪ್ತರ ನಾಯಕತ್ವ ವಹಿಸಿಕೊಳ್ಳಲು ಮುಂದಾದರೆ ಸಂಜೆಯ ವೇಳೆಗೆ ಈಗಾಗಲೇ ಅತೃಪ್ತಿ ವ್ಯಕ್ತಪಡಿಸಿರುವ ಖಮರುಲ್ ಇಸ್ಲಾಂ, ಮಾಲೀಕಯ್ಯ ಗುತ್ತೇದಾರ್ ಶಿವಮೂರ್ತಿ ನಾಯಕ್, ಎಸ್.ಟಿ.ಸೋಮಶೇಖರ್ ಸೇರಿದಂತೆ ಸುಮಾರು 20 ಶಾಸಕರು ಸಭೆಯೊಂದನ್ನು ನಡೆಸುವ ಸಾಧ್ಯತೆಯಿದೆ. ಇದಾದ ನಂತರ ಅತೃಪ್ತರ ಮುಂದಿನ ಹೆಜ್ಜೆಗಳು ಸ್ಪಷ್ಟಗೊಳ್ಳಲಿವೆ ಎಂದು ಮೂಲಗಳು ತಿಳಿಸಿವೆ
ಶ್ರೀನಿವಾಸ್ ಪ್ರಸಾದ್ ಅವರು ತಮ್ಮ ಮುಂದಿನ ಹೆಜ್ಜೆಯ ಬಗ್ಗೆ ಚರ್ಚಿಸಲು ರಾಜ್ಯಸಭೆ ಸದಸ್ಯ ಆಸ್ಕರ್ ಫರ್ನಾಂಡಿಸ್ ಅವರನ್ನು ಭೇಟಿ ಮಾಡಲಿದ್ದಾರೆ. ಈ ನಡುವೆ ಸಿದ್ದರಾಮಯ್ಯ ಪರವಾಗಿ ಮಂಗಳವಾರ ರಾತ್ರಿ ಅಂಬರೀಶ್ ಅವರನ್ನು ಭೇಟಿ ಸಚಿವ ಎಂ.ಬಿ.ಪಾಟೀಲ್ ಹಾಗೂ ಶಾಸಕ ಗೋವಿಂದರಾಜು ಭೇಟಿ ಆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


