ಸೋಲಾರ್ ಹಗರಣ: ಸರಿತಾ ನಾಯರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್
ಕೇರಳದ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಸೋಲಾರ್ ಹಗರಣದ ಪ್ರಮುಖ ಆರೋಪಿ ಸರಿತಾ ಎಸ್ ನಾಯರ್ ವಿರುದ್ಧ ನ್ಯಾಯಾಂಗ ಆಯೋಗ...

Published On :
ಕೊಚ್ಚಿ: ಕೇರಳದ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಸೋಲಾರ್ ಹಗರಣದ ಪ್ರಮುಖ ಆರೋಪಿ ಸರಿತಾ ಎಸ್ ನಾಯರ್ ವಿರುದ್ಧ ನ್ಯಾಯಾಂಗ ಆಯೋಗ ಗುರುವಾರ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ.
ಸಮನ್ಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಸರಿತಾ ವಿರುದ್ಧ ಹಗರಣದ ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ಜಿ. ಶಿವರಾಜನ್ ಅವರು ಇಂದು ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದ್ದಾರೆ. ಅಲ್ಲದೆ ಆರೋಪಿಯನ್ನು ಬಂಧಿಸಿ ಜೂನ್ 27ರಂದು ಆಯೋಗದ ಮುಂದೆ ವಿಚಾರಣೆಗೆ ಹಾಜರುಪಡಿಸುವಂತೆ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಿದ್ದಾರೆ.
ನಿನ್ನೆಯಷ್ಟೇ ಆರೋಪಿಯನ್ನು ನಾಳೆ ವಿಚಾರಣೆಗೆ ಹಾಜರುಪಡಿಸುವಂತೆ ಶಿವರಾಜನ್ ಅವರು ಸರಿತಾ ಪರ ವಕೀಲ ಸಿ ಡಿ ಜಾನಿ ಅವರಿಗೆ ಸೂಚಿಸಿತ್ತು. ಆದರೆ ತನ್ನ ಕಕ್ಷಿದಾರಳನ್ನು ಇಂದು ವಿಚಾರಣೆಗೆ ಹಾಜರುಪಡಿಸಿದ ಜಾನಿ, ಒಂದು ವಾರಗಳ ಕಾಲವಕಾಶ ನೀಡುವಂತೆ ಮನವಿ ಮಾಡಿದರು. ಇದರಿಂದ ಆಕ್ರೋಶಗೊಂಡ ನ್ಯಾಮೂರ್ತಿಗಳು, ಆರೋಪಿಯ ವಿರುದ್ಧ ಬಂಧನ ವಾರಂಟ್ ಜಾರಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


