ಬ್ರೆಕ್ಸಿಟ್ ನಂತರ ದೆಹಲಿಗೆ ಪೂರ್ಣ ಪ್ರಮಾಣದ ರಾಜ್ಯಕ್ಕಾಗಿ ಜನಮತ ಸಂಗ್ರಹಕ್ಕೆ ಮುಂದಾದ ಕೇಜ್ರಿವಾಲ್
ಬ್ರಿಟನ್ ನಲ್ಲಿ ಐತಿಹಾಸಿಕ ಬ್ರೆಕ್ಸಿಟ್ ಜನಮತ ಸಂಗ್ರಹದಿಂದ ಪ್ರೇರೆಪಿತರಾಗಿರುವ ಆಮ್ ಆದ್ಮಿ ಪಕ್ಷ, ದೆಹಲಿಗೆ ಪೂರ್ಣ ಪ್ರಮಾಣದ ರಾಜ್ಯಕ್ಕಾಗಿ...

Published On :
ನವದೆಹಲಿ: ಬ್ರಿಟನ್ ನಲ್ಲಿ ಐತಿಹಾಸಿಕ ಬ್ರೆಕ್ಸಿಟ್ ಜನಮತ ಸಂಗ್ರಹದಿಂದ ಪ್ರೇರೆಪಿತರಾಗಿರುವ ಆಮ್ ಆದ್ಮಿ ಪಕ್ಷ, ದೆಹಲಿಗೆ ಪೂರ್ಣ ಪ್ರಮಾಣದ ರಾಜ್ಯಕ್ಕಾಗಿ ಅದೇ ರೀತಿಯ ಜನಮತ ಸಂಗ್ರಹವಾಗಬೇಕು ಎಂದು ಶುಕ್ರವಾರ ಹೇಳಿದೆ.
ಐರೋಪ್ಯ ಒಕ್ಕೂಟದಿಂದ ಬ್ರಿಟನ್ ಹೊರನಡೆಯಬೇಕು ಎಂಬುದರ ಕುರಿತು ಬ್ರಿಟನ್ ನಲ್ಲಿ ನಡೆದ ಬ್ರೆಕ್ಸಿಟ್ ಜನಮತಗಣನೆಯ ಫಲಿತಾಂಶ ಹೊರಬಿದ್ದಿದ್ದು, ಬ್ರಿಟನ್ ಹೊರನಡೆಯಬೇಕು ಎಂದು ಸ್ಪಷ್ಟ ಜನಾಭಿಪ್ರಾಯ ಬಂದಿದೆ. ಈ ಸುದ್ದಿ ಪ್ರಕಟವಾಗುತ್ತಿದ್ದಂತೆ ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಶೀಘ್ರದಲ್ಲೇ ಪೂರ್ಣ ರಾಜ್ಯಕ್ಕಾಗಿ ದೆಹಲಿಯಲ್ಲೂ ಇಂತಹ ಜನಮತಗಣನೆ ನಡೆಯಲಿದೆ ಎಂದಿದ್ದಾರೆ. ಅಲ್ಲದೆ ಎಎಪಿ ನಾಯಕ ಆಶಿಶ್ ಖೇತನ್ ಸಹ ದೆಹಲಿಗೆ ಪೂರ್ಣ ಪ್ರಮಾಣದ ರಾಜ್ಯದ ಸ್ಥಾನಮಾನಕ್ಕಾಗಿ ಜನಾಭಿಪ್ರಾಯ ಸಂಗ್ರಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರು ಈ ಹಿಂದೆಯೂ ಹಲವು ಬಾರಿ ದೆಹಲಿಗೆ ಪೂರ್ಣ ಪ್ರಮಾಣದ ರಾಜ್ಯದ ಸ್ಥಾನಮಾನ ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಅಲ್ಲದೆ ಕಳೆದ ಮೇ ನಲ್ಲಿ ಈ ಸಂಬಂಧ ಕರಡು ಮಸೂದೆಯನ್ನು ಸಿದ್ಧಪಡಿಸಿದ್ದ ದೆಹಲಿ ಸರ್ಕಾರ, ಈ ಕುರಿತು ಸಲಹೆ ನೀಡುವಂತೆ ಸಾರ್ವಜನಿಕರಿಗೆ ಆಹ್ವಾನ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


