ದೇಶ

ಸಿಆರ್ ಪಿಎಫ್ ಯೋಧರ ಹತ್ಯೆಯಿಂದ ಕಾಶ್ಮೀರಕ್ಕೆ ಅವಮಾನ: ಮೆಹಬೂಬಾ ಮುಫ್ತಿ

ಜಮ್ಮು-ಕಾಶ್ಮೀರದ ಪುಲ್ವಾಮದ ಪ್ಯಾಂಪೋರ್ ನಲ್ಲಿರುವ ಸಿಆರ್ ಪಿಎಫ್ ಮೀಸಲು ಪಡೆ ಮೇಲೆ ಉಗ್ರರು ದಾಳಿ ನಡೆಸಿರುವ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ...

ಸಿಆರ್ ಪಿಎಫ್ ಯೋಧರ ಹತ್ಯೆಯಿಂದ ಕಾಶ್ಮೀರಕ್ಕೆ ಅವಮಾನ: ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ
Published On :

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮದ ಪ್ಯಾಂಪೋರ್ ನಲ್ಲಿರುವ ಸಿಆರ್ ಪಿಎಫ್ ಮೀಸಲು ಪಡೆ ಮೇಲೆ ಉಗ್ರರು ದಾಳಿ ನಡೆಸಿರುವ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ಘಟನೆಯಿಂದ  ರಾಜ್ಯಕ್ಕೆ ಅವಮಾನ ಉಂಟಾಗಿರುವುದಷ್ಟೇ ಅಲ್ಲದೆ ಪವಿತ್ರ ರಂಜಾನ್ ಆಚರಣೆ ನಡೆಯುತ್ತಿರುವ ತಿಂಗಳಲ್ಲಿ ಸಿಆರ್ ಪಿಎಫ್ ಯೋಧರ ಹತ್ಯೆ ನಡೆದಿರುವುದರಿಂದಇಸ್ಲಾಮ್ ಧರ್ಮಕ್ಕೂ ಚ್ಯುತಿ ಉಂಟಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹುತಾತ್ಮರಾಗಿರುವ ಸಿಆರ್ ಪಿ ಎಫ್ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸುರುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮೆಹಬೂಬಾ ಮುಫ್ತಿ, ಸಿಆರ್ ಪಿಎಎಫ್ ಯೋಧರ ಹತ್ಯೆಯನ್ನು ಖಂಡಿಸಿದ್ದಾರೆ. ಧರ್ಮನಿಷ್ಠೆ ಹಾಗೂ ತಪಸ್ಸನ್ನು ಆಚರಿಸುವ ರಂಜಾನ್ ವ್ರತಾಚರಣೆ ತಿಂಗಳಲ್ಲೇ ಇಂತಹ ದುರ್ಘಟನೆ ನಡೆದಿರುವುದು ತಲೆತಗ್ಗಿಸುವಂತಾಗಿದೆ ಎಂದು ಮೆಹಬೂಬಾ ಮುಫ್ತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಂಜಾನ್ ಆಚರಣೆ ತಿಂಗಳಲ್ಲಿ ಇಂತಹ ದುಷ್ಕೃತ್ಯಗಳಲ್ಲಿ ತೊಡಗದಂತೆ ಅಲ್ಲಾನ ಆದೇಶವಿದೆ, ಆದರೆ ಇಂತಹ ಘಟನೆಗಳು ನಡೆಯುತ್ತಿರುವುದು ಕಾಶ್ಮೀರಕ್ಕೆ ಶೋಭೆ ತರುವುದಿಲ್ಲ ಎಂದು ಮೆಹಬೂಬಾ ಮುಫ್ತಿ ಹೇಳಿದ್ದಾರೆ. ಯೋಧರು ಶೂಟಿ೦ಗ್ ತರಬೇತಿ ಮುಗಿಸಿ ಶ್ರೀನಗರದ ಶಿಬಿರಕ್ಕೆ ಹಿ೦ದಿರುಗುತ್ತಿದ್ದಾಗ ಯೋಧರ ಮೇಲೆ ಉಗ್ರರು ನಡೆಸಿದ್ದ ದಾಳಿಯಲ್ಲಿ 8 ಯೋಧರು ಹುತಾತ್ಮರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.