ದೇಶ

ಅಗಸ್ತಾ ವೆಸ್ಟ್ ಲ್ಯಾಂಡ್ ಹಗರಣದಲ್ಲಿ ಭಾಗಿಯಾದ ಎಲ್ಲರ ವಿರುದ್ಧ ಕ್ರಮ: ಪರಿಕ್ಕರ್

ಅಗಸ್ತ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣದಲ್ಲಿ ಭಾಗಿಯಾದವರನ್ನು ಶಿಕ್ಷಿಸದೆ ಬಿಡುವುದಿಲ್ಲ ಎಂದು ರಕ್ಷಣಾ ಸಚಿವ ...

ಅಗಸ್ತಾ ವೆಸ್ಟ್ ಲ್ಯಾಂಡ್ ಹಗರಣದಲ್ಲಿ ಭಾಗಿಯಾದ ಎಲ್ಲರ ವಿರುದ್ಧ ಕ್ರಮ: ಪರಿಕ್ಕರ್
ರಕ್ಷಣಾ ಸಚಿವ ಮನೋಹರ್ ಪರಿಕ್ಕರ್
Published On :

ಕಟಕ್(ಒಡಿಶಾ): ಅಗಸ್ತ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣದಲ್ಲಿ ಭಾಗಿಯಾದವರನ್ನು ಶಿಕ್ಷಿಸದೆ ಬಿಡುವುದಿಲ್ಲ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ತಿಳಿಸಿದ್ದಾರೆ.

ಕಟಕ್ ನಲ್ಲಿ ಎನ್ ಡಿಎ ಸರ್ಕಾರದ ಎರಡು ವರ್ಷದ ಆಡಳಿತ ಹಿನ್ನೆಲೆಯಲ್ಲಿ ಆಯೋಜಿಸಿದ್ದ ವಿಕಾಸ ಉತ್ಸವದಲ್ಲಿ ಮಾತನಾಡಿದ ಅವರು, ಅಗಸ್ತ ವೆಸ್ಟ್ ಲ್ಯಾಂಡ್ ಹಗರಣದಲ್ಲಿ ಭಾಗಿಯಾದವರು ಎಷ್ಟೇ ದೊಡ್ಡ ವ್ಯಕ್ತಿಯಾದರೂ ಬಿಡುವುದಿಲ್ಲ. ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ ಎಂದರು.

ನರೇಂದ್ರ ಮೋದಿ ಸರ್ಕಾರದ ಎರಡು ವರ್ಷಗಳ ಆಡಳಿತದ ಬಗ್ಗೆ ಮಾತನಾಡಿದ ಅವರು, ಅಧಿಕಾರದಲ್ಲಿರುವಾಗ ಭ್ರಷ್ಟಾಚಾರರಹಿತ ಆಡಳಿತ ಹೇಗೆ ನೀಡಬಹುದೆಂದು ಮೋದಿ ಸರ್ಕಾರ ಕಲಿಸಿಕೊಟ್ಟಿದೆ ಎಂದರು.ರಾಜಕೀಯ ನಾಯಕರಾಗಿ ತಾವು ದೇಶದ ಸಮಗ್ರತೆಯನ್ನು ಬಯಸುವುದಾಗಿ ಹೇಳಿದರು.

ಜಮ್ಮು-ಕಾಶ್ಮೀರ ಗಡಿ ಪ್ರದೇಶದಲ್ಲಿ ಭದ್ರತಾ ಪಡೆಗಳ ಕಾರ್ಯವೈಖರಿಯನ್ನು ಶ್ಲಾಘಿಸಿದ ಅವರು, ಇತ್ತೀಚಿನ ದಿನಗಳಲ್ಲಿ ಭಾರತದೊಳಗೆ ನುಸುಳುವ ಉಗ್ರರ ಸಂಖ್ಯೆ ಕಡಿಮೆಯಾಗಿದೆ. ಯಾಕೆಂದರೆ ಶೇಕಡಾ 70ರಿಂದ 75ರಷ್ಟು ಸಶಸ್ತ್ರ ಅತಿಕ್ರಮಣಕಾರರನ್ನು ನಮ್ಮ ಸೇನಾ ಯೋಧರು ಹೊರಹಾಕಿದ್ದಾರೆ ಎಂದು ಶ್ಲಾಘಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.