ಕೇಜ್ರಿವಾಲ್ ವಿರುದ್ಧದ ಸ್ವಾಮಿ ದೂರು ಗೃಹ ಸಚಿವಾಲಯಕ್ಕೆ ರವಾನೆ
ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ನೀಡಿದ್ದ ದೂರನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಗೃಹ ಸಚಿವಾಲಯಕ್ಕೆ ರವಾನೆ ಮಾಡಿದ್ದಾರೆ.

ನವದೆಹಲಿ: ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ನೀಡಿದ್ದ ದೂರನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಗೃಹ ಸಚಿವಾಲಯಕ್ಕೆ ರವಾನೆ ಮಾಡಿದ್ದಾರೆ.
ಆಮ್ ಆದ್ಮಿ ಪಕ್ಷದ ವಿರುದ್ಧ ಆರೋಪ ಮಾಡಿದ್ದ ಸುಬ್ರಹ್ಮಣಿಯನ್ ಸ್ವಾಮಿ, ಆಮ್ ಆದ್ಮಿ ಪಕ್ಷ ದೆಹಲಿಯಲ್ಲಿ ವ್ಯಾಪ್ತಿ ಮೀರಿ ಅವಿವೇಕಿಯಂತೆ ವರ್ತಿಸುತ್ತಿದೆ. ಇನ್ನು ದೆಹಲಿ ಲೆಫ್ಟಿನೆಂಟ್ ಗೌರ್ನರ್ ನಜೀಬ್ ಜಂಗ್ ಅವರು ಕಾಂಗ್ರೆಸ್ ಪಕ್ಷದ ಪರವಾಗಿ ಕಾರ್ಯನಿರ್ವಹಿಸುತ್ತಿದ್ದು ಆಮ್ ಆದ್ಮಿ ಪಕ್ಷದ ಅತಿರೇಕಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿ ರಾಷ್ಟ್ರಪತಿಗಳಿಗೆ ದೂರು ನೀಡಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದರು. ದೂರಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಷ್ಟ್ರಪತಿಗಳ ಕಚೇರಿಯ ಕಾರ್ಯದರ್ಶಿ, ದೂರನ್ನು ಗೃಹ ಸಚಿವಾಲಯಕ್ಕೆ ಕಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


