ದೇಶ

ದುರ್ವಿಧಿ: ಪ್ಲಾಸ್ಟಿಕ್ ಚೀಲ ತಲೆಗೆ ಸುತ್ತಿಕೊಂಡು 4 ವರ್ಷದ ಬಾಲಕ ಸಾವು

ಪ್ಲಾಸ್ಟಿಕ್ ಕವರ್ ಜತೆ ಆಟವಾಡುತ್ತಿದ್ದ 4 ವರ್ಷದ ಬಾಲಕನೊಬ್ಬ ಅದನ್ನು ಹೆಲ್ಮೆಟ್ ರೀತಿ ತಲೆಗೆ ಸುತ್ತಿಕೊಂಡಿದ್ದರಿಂದ ಉಸಿರಾಡಲು ಸಾಧ್ಯವಾಗದೇ ಮೃತಪಟ್ಟಿರುವ...

ದುರ್ವಿಧಿ: ಪ್ಲಾಸ್ಟಿಕ್ ಚೀಲ ತಲೆಗೆ ಸುತ್ತಿಕೊಂಡು 4 ವರ್ಷದ ಬಾಲಕ ಸಾವು
ಶ್ರಿಯಾನ್
Published On :

ಹೈದರಾಬಾದ್: ಪ್ಲಾಸ್ಟಿಕ್ ಕವರ್ ಜತೆ ಆಟವಾಡುತ್ತಿದ್ದ 4 ವರ್ಷದ ಬಾಲಕನೊಬ್ಬ ಅದನ್ನು ಹೆಲ್ಮೆಟ್ ರೀತಿ ತಲೆಗೆ ಸುತ್ತಿಕೊಂಡಿದ್ದರಿಂದ ಉಸಿರಾಡಲು ಸಾಧ್ಯವಾಗದೇ ಮೃತಪಟ್ಟಿರುವ ದಾರುಣ ಘಟನೆ ಹೈದರಾಬಾದ್ ನಿಜಾಂಪೇಟೆಯ ಕುಕ್ಕುಟಪಲ್ಲಿಯಲ್ಲಿ ನಡೆದಿದೆ.

ಮೃತ ಬಾಲಕ ಶ್ರಿಯಾನ್ ಎಂದು ಗುರುತಿಸಲಾಗಿದ್ದು, ಮನೆಯಲ್ಲಿ ಪ್ಲಾಸ್ಟಿಕ್ ಚೀಲದೊಂದಿಗೆ ಆಟವಾಡುತ್ತಿದ್ದ ಶ್ರಿಯಾನ್ ಅದನ್ನು ತಲೆಗೆ ಸುತ್ತಿಗೊಂಡಿದ್ದಾನೆ. ಇದರಿಂದ ಉಸಿರಾಡಲು ಸಾಧ್ಯವಾಗದೇ ಅರೇ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾನೆ. ಬಳಿಕ ಮಗ ಏನು ಮಾಡುತ್ತಿದ್ದಾನೆ ಎಂದು ನೋಡಲು ಬಂದ ತಾಯಿಗೆ ಆಕಾಶವೇ ತಲೆ ಮೇಲೆ ಬಿದ್ದಂತಾಗಿದೆ.

ಕೂಡಲೇ ಶ್ರಿಯಾನ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಆದರೆ ಅಷ್ಟರಲ್ಲಾಗಲೇ ಬಾಲಕ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.