ಪುಲ್ವಾಮ ಗುಂಡಿನ ಕಾಳಗ: ಯೋಧರಿಂದ ಇಬ್ಬರು ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆಯುತ್ತಿದ್ದ ಉಗ್ರರು ಹಾಗೂ ಯೋಧರ ನಡುವಿನ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರನ್ನು ಹತ್ಯೆ ಮಾಡುವಲ್ಲಿ ಭಾರತೀಯ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆಯುತ್ತಿದ್ದ ಉಗ್ರರು ಹಾಗೂ ಯೋಧರ ನಡುವಿನ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡುವಲ್ಲಿ ಭಾರತೀಯ ಯೋಧರು ಗುರುವಾರ ಯಶಸ್ವಿಯಾಗಿದ್ದಾರೆ.
ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ಅನುಮಾನಾಸ್ಪದವಾಗಿ ಓಡಾಡುತ್ತಿರುವುದಾಗಿ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಮಲ್ವಾರದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಕಾರ್ಯಾಚರಣೆ ಮುಂದುವರಿಸಿ ಅಡಗಿ ಕುಳಿತಿದ್ದ ಹಿಜ್ಬುಲ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಿನ್ನೆಯಷ್ಟೇ ಬಾರಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದೆ ಇಬ್ಬರು ಉಗ್ರರನ್ನು ಬಂಧನಕ್ಕೊಳಪಡಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


