ಹೈದರಾಬಾದ್ ನಲ್ಲಿ 'ನೋ ಹೆಲ್ಮೆಟ್-ನೋ ಪೆಟ್ರೋಲ್ ' ನಿಯಮ ಜಾರಿ ನಿರೀಕ್ಷೆ
ರಸ್ತೆ ಅಪಘಾತ, ಅದರಲ್ಲೂ ದ್ವಿಚಕ್ರ ವಾಹನ ಸವಾರರಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಅಪಘಾತಗಳಾಗುತ್ತಿರುವುದನ್ನು ಮನಗಂಡಿರುವ...

ಹೈದರಾಬಾದ್: ರಸ್ತೆ ಅಪಘಾತ, ಅದರಲ್ಲೂ ದ್ವಿಚಕ್ರ ವಾಹನ ಸವಾರರಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಅಪಘಾತಗಳಾಗುತ್ತಿರುವುದನ್ನು ಮನಗಂಡಿರುವ ತೆಲಂಗಾಣ ಸರ್ಕಾರ ಹೈದರಾಬಾದ್ ನಲ್ಲಿ ನೋ ಹೆಲ್ಮೆಟ್-ನೋ ಪೆಟ್ರೋಲ್' ನಿಯಮವನ್ನು ಜಾರಿಗೆ ತರಲು ಮುಂದಾಗಿದೆ.
ಹೊಸ ನಿಯಮದ ಪ್ರಕಾರ, ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸಿದರೆ ನಗರಗಳ ಪೆಟ್ರೋಲ್ ಪಂಪ್ ಗಳಲ್ಲಿ ಪೆಟ್ರೋಲ್ ಸಿಗುವುದಿಲ್ಲ. ಪ್ರಾಯೋಗಿಕವಾಗಿ ಈ ನಿಯಮವನ್ನು ಅದಿಲಾಬಾದ್ ಜಿಲ್ಲೆಯಲ್ಲಿ ಜೂನ್ 2ರಿಂದ ಜಾರಿಗೆ ಬಂದಿದೆ.
ಇಲ್ಲಿ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ಸಿಟಿ ಟ್ರಾಫಿಕ್ ಪೊಲೀಸರು ಅಧ್ಯಯನ ಮಾಡುತ್ತಿದ್ದಾರೆ. ಒಂದಿಬ್ಬರು ಹೆಲ್ಮೆಟ್ ಧರಿಸದೆ ಪೆಟ್ರೋಲ್ ಪಂಪ್ ನಲ್ಲಿ ಗಲಾಟೆ ಮಾಡಿದ್ದು ಬಿಟ್ಟರೆ ನಿಯಮವನ್ನು ದ್ವಿಚಕ್ರ ವಾಹನ ಸವಾರರು ಗಾಳಿಗೆ ತೂರಿದ್ದು ಕಂಡುಬಂದಿಲ್ಲ.
ಸಾರಿಗೆ ಇಲಾಖೆ ಅಧಿಕಾರಿಗಳು ಅದಿಲಾಬಾದ್ ನಲ್ಲಿ ಪೆಟ್ರೋಲ್ ಪಂಪ್ ಡೀಲರ್ ಗಳು ಮತ್ತು ಮಾಲೀಕರ ಜೊತೆ ನಿಯಮ ಜಾರಿಗೆ ತರುವ ಮುನ್ನ ಸಭೆ ನಡೆಸಿ ಚರ್ಚಿಸಿದ್ದರು. ಮುಂದಿನ ದಿನಗಳಲ್ಲಿ ಈ ನಿಯಮ ಜಾರಿಗೆ ಬರುವ ನಿರೀಕ್ಷೆಯಿದೆ.
ಕೆಲ ದಿನಗಳ ಹಿಂದೆ ಕೇರಳ ಸರ್ಕಾರ ಕೂಡ, ಆಗಸ್ಟ್ 1ರಿಂದ ಹೆಲ್ಮೆಟ್ ಕಡ್ಡಾಯ ನಿಯಮವನ್ನು ಜಾರಿಗೆ ತರುವುದಾಗಿ ಹೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


