ವಿದ್ಯಾರ್ಥಿನಿ ಅತ್ಯಾಚಾರ ವಿಡಿಯೋ ವೈರಲ್: ಶಾಲಾ ವ್ಯವಸ್ಥಾಪಕ ಸೆರೆ
15 ವರ್ಷದ ಶಾಲಾ ವಿದ್ಯಾರ್ಥಿನಿಯ ಅತ್ಯಾಚಾರ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ ಶಾಲಿಯ ವ್ಯವಸ್ಥಾಪಕನನ್ನು ಪೊಲೀಸರು ಬಂಧಿಸಿದ್ದಾರೆ...

Published On :
ಇಟಾ(ಉತ್ತರಪ್ರದೇಶ): 15 ವರ್ಷದ ಶಾಲಾ ವಿದ್ಯಾರ್ಥಿನಿಯ ಅತ್ಯಾಚಾರ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ ಶಾಲಿಯ ವ್ಯವಸ್ಥಾಪಕನನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ವರ್ಷ ತನ್ನ ಶಾಲೆಯ ವಿದ್ಯಾರ್ಥಿನಿಯ ಮೇಲೆ ಶಾಲಾ ವ್ಯವಸ್ಥಾಪಕ ಜೀತೇಂದ್ರ ಕುಮಾರ್ ಎಂಬಾತ ಅತ್ಯಾಚಾರ ನಡೆಸಿ ಅದನ್ನು ವಿಡಿಯೋ ಮಾಡಿಕೊಂಡಿದ್ದ. ಇದರಿಂದ ಹೆದರಿಯ ಹುಡುಗಿ ಈ ವಿಷಯವನ್ನು ಯಾರಲ್ಲೂ ಹೇಳಿರಲಿಲ್ಲ.
ಇದನ್ನು ಬಳಸಿಕೊಂಡ ಜೀತೇಂದ್ರ ಕುಮಾರ್ ಮುಂದೆ ಹುಡುಗಿಯನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಆದರೆ ಇದಕ್ಕಿದ್ದಂತೆ ಈ ವಿಡಿಯೋ ವೈರಲ್ ಆಗಿದ್ದು. ಇದಾಗ ಬಳಿಕ ಹುಡುಗಿ ಮನೆಯವರಿಗೆ ವಿಷಯ ಮುಟ್ಟಿಸಿದ್ದಾಳೆ.
ಮಗಳ ಮೇಲಿನ ಅತ್ಯಾಚಾರ ವಿಷಯ ತಿಳಿಯುತ್ತಿದ್ದಂತೆ ಪೋಷಕರು ಕೋತ್ವಾಲಿ ಬಗ್ವಾಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೈರಲ್ ಆಗಿದ್ದ ವಿಡಿಯೋ ಆಧರಿಸಿ ಪೊಲೀಸರು ಜೀತೇಂದ್ರನನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


