ನೇತಾಜಿಗೆ ಸಂಬಂಧಪಟ್ಟ ದಾಖಲೆ ಒದಗಿಸಲು ವಿದೇಶಗಳಿಗೆ ಭಾರತ ಮನವಿ
ನೇತಾಜಿ ಸುಭಾಷ್ ಚಂದ್ರ ಬೋಸ್ ಗೆ ಸಂಬಂಧಿಸಿದಂತಹ ದಾಖಲೆಗಳಿದ್ದರೆ ಭಾರತಕ್ಕೆ ನೀಡಿ ಎಂದು ಜಪಾನ್, ರಷ್ಯಾ, ಬ್ರಿಟನ್...

Published On :
ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಗೆ ಸಂಬಂಧಿಸಿದಂತಹ ದಾಖಲೆಗಳಿದ್ದರೆ ಭಾರತಕ್ಕೆ ನೀಡಿ ಎಂದು ಜಪಾನ್, ರಷ್ಯಾ, ಬ್ರಿಟನ್ ಸೇರಿದಂತೆ ಹಲವು ದೇಶಗಳಿಗೆ ಮನವಿ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಗೃಹ ಇಲಾಖೆಯ ರಾಜ್ಯ ಸಚಿವ ಹರಿಬಾಯ್ ಚೌಧರಿ ಇಂದು ರಾಜ್ಯಸಭೆಯಲ್ಲಿ ಈ ವಿಷಯವನ್ನು ಹೇಳಿದ್ದು, ನೇತಾಜಿ ಸಂಬಂಧಪಟ್ಟ ದಾಖಲೆಗಳಿದ್ದರೇ ಅದನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಹಲವಾರು ದೇಶಗಳಿಗೆ ಮನವಿ ಮಾಡಲಾಗಿದೆ. ಆಸ್ಟ್ರೇಲಿಯಾ, ಜರ್ಮನಿ, ಇಟಲಿ, ಜಪಾನ್, ರಷ್ಯಾ, ಬ್ರಿಟನ್ ಮತ್ತು ಅಮೆರಿಕಾ ಸರ್ಕಾರಗಳಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ರಷ್ಯನ್ ಫೆಡರೇಷನ್, ಜರ್ಮನಿ ಫೆಡರಲ್ ರಿಪಬ್ಲಿಕ್, ಜಪಾನ್ ಮತ್ತು ಇಂಗ್ಲೆಂಡ್ ನಿಂದ ಪ್ರತಿಕ್ರಿಯೆ ಬಂದಿದೆ. ಆದರೆ, ಆಸ್ಟ್ರೇಲಿಯಾ, ಇಟಲಿ ಮತ್ತು ಅಮೆರಿಕಾದಿಂದ ಇನ್ನು ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅವರು ಹೇಳಿದ್ದಾರೆ.
ಈಗಾಗಲೇ ಸರ್ಕಾರದ ಬಳಿ ಇದ್ದ ನೇತಾಜಿಗೆ ಸಂಬಂಧ ಪಟ್ಟ ದಾಖಲೆಗಳನ್ನು ಬಹಿರಂಗಗೊಳಿಸಲಾಗಿದೆ. ಇವೆಲ್ಲವೂ ರಾಷ್ಟ್ರೀಯ ಪತ್ರಾಗಾರ ಇಲಾಖೆಗೆ ಹಸ್ತಾಂತರಿಸಲಾಗಿದೆ. ಮತ್ತಷ್ಟು ದಾಖಲೆಗಳನ್ನು ಕಲೆ ಹಾಕುವುದಕ್ಕೆ ಭಾರತ ಪ್ರಯತ್ನಿಸುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


