ಯಾರಾದರೂ ದೇಶವಿರೋಧಿ ಮಾತನಾಡಿದರೇ ಇಂಚಿಂಚಾಗಿ ಕತ್ತರಿಸುತ್ತೇನೆ: ಬಿಜೆಪಿ ನಾಯಕ
ಭಾರತದಲ್ಲಿ ಯಾರಾದರೂ ದೇಶ ವಿರೋಧಿ ಘೋಷಣೆ ಕೂಗಿದರೇ ಅವರನ್ನು ಇಂಚಿಂಚಾಗಿ ಕತ್ತರಿಸುವುದಾಗಿ ಬಿಜೆಪಿ ನಾಯಕರೊಬ್ಬರು ವಿವಾದಾತ್ಮಕ ಹೇಳಿಕೆ

ಕೊಲ್ಕೋತಾ: ಭಾರತದಲ್ಲಿ ಯಾರಾದರೂ ದೇಶ ವಿರೋಧಿ ಘೋಷಣೆ ಕೂಗಿದರೇ ಅವರನ್ನು ಇಂಚಿಂಚಾಗಿ ಕತ್ತರಿಸುವುದಾಗಿ ಬಿಜೆಪಿ ನಾಯಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಪಶ್ಚಿಮ ಬಂಗಾಳದ ಬಿರ್ ಭೂಮ್ ರಾಜಧಾನಿ ಸಿಯೂರಿಯಲ್ಲಿ ಪ್ರತಿಭಟನಾ ರ್ಯಾಲಿ ಉದ್ಘಾಟಿಸಿ ಮಾತನಾಡಿದ ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲಿಪ್ ಘೋಷ್ ದೇಶ ವಿರೋಧಿ ಘೋಷಣೆ ಕೂಗುವವರ ವಿರುದ್ಧ ಹರಿಹಾಯ್ದಿದ್ದಾರೆ.
ಯಾರಾದರೂ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದರೇ, ಅಂಥವರನ್ನು ತಲೆಯಿಂದ ಬುಡದವರೆಗೆ ಇಂಚಿಂಚಾಗಿ ಕತ್ತರಿಸುವುದಾಗಿ ಬಿರ್ ಭೂಮ್ ನಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಹೇಳಿದ್ದಾರೆ.
ಈ ವಿವಾದಾತ್ಮಕ ಹೇಳಿಕೆಯನ್ನು ವಿದ್ಯಾರ್ಥಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ. ಈ ಹೇಳಿಕೆ ಜಿಲ್ಲೆಯ ಹಲವೆಡೆ ಕಿಡಿ ಹೊತ್ತಿಸಿದ್ದು, ಇಲ್ಲಮ್ ಬಜಾರ್ ಸೇರಿ ಹಲವೆಡೆ ಪೊಲೀಸ್ ಠಾಣೆ ಮತ್ತು ಹಲವು ವಾಹನಗಳನ್ನು ಜಖಂಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


