ದೇಶದಲ್ಲಿ ಬಡತನ ಬಿತ್ತಿದ್ದು ಕಾಂಗ್ರೆಸ್: ಲೋಕಸಭೆಯಲ್ಲಿ ಪ್ರಧಾನಿ ಮೋದಿ ತಿರುಗೇಟು
ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ ಮಂಡಿಸಿ ಲೋಕಸಭೆಯಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಆರೋಪ, ಟಿಕೆಗಳಿಗೆ ಉತ್ತರ ನೀಡಿದ್ದಾರೆ.

ನವದೆಹಲಿ: ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ ಮಂಡಿಸಿ ಲೋಕಸಭೆಯಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಆರೋಪ, ಟೀಕೆಗಳಿಗೆ ಉತ್ತರ ನೀಡಿದ್ದಾರೆ.
ಸರ್ಕಾರದ ಯೋಜನೆಗಳನ್ನು ಟೀಕಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ, ಕಾಂಗ್ರೆಸ್ ನ ಮಾಜಿ ಪ್ರಧಾನಿಗಳ ಹೇಳಿಕೆಗಳನ್ನೇ ಉದಾಹರಣೆ ನೀಡಿ ತಿರುಗೇಟು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ದೇಶದ ಮಾನ ಹರಾಜು ಹಾಕುವ ರೀತಿಯಲ್ಲಿ ಸರ್ಕಾರದ ಯೋಜನೆಗಳನ್ನು ಪ್ರತಿಪಕ್ಷಗಳು ಅಪಹಾಸ್ಯ ಮಾಡಬಾರದು, ಇದರಿಂದ ದೇಶ ದುರ್ಬಲ ಸ್ಥಿತಿಯಲ್ಲಿದೆ ಎಂಬ ಸಂದೇಶ ರವಾನೆಯಾಗುತ್ತದೆ ಎಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೇಳಿದ್ದರು ಎಂದಿದ್ದಾರೆ.
ಒಂದು ವೇಳೆ ಸರ್ಕಾರದ ಯೋಜನೆಗಳಲ್ಲಿ ಲೋಪಗಳಿದ್ದರೆ ಅದನ್ನು ಒಟ್ಟಿಗೆ ಕುಳಿತು ಸಮಾಲೋಚನೆ ಮೂಲಕ ಬಗೆಹರಿಸಿಕೊಳ್ಳೋಣ ಎಂದು ಪ್ರತಿಪಕ್ಷಗಳಿಗೆ ಮೋದಿ ಸಲಹೆ ನೀಡಿದ್ದಾರೆ. ಇದೇ ವೇಳೆ ಸಂಸತ್ ಅಧಿವೇಶನಕ್ಕೆ ಗದ್ದಲಗಳ ಮೂಲಕ ಅಡ್ಡಿ ಪಡಿಸುತ್ತಿರುವ ಕಾಂಗ್ರೆಸ್ ವಿರುದ್ಧವೂ ಪರೋಕ್ಷವಾಗಿ ಹರಿಹಾಯ್ದಿರುವ ಪ್ರಧಾನಿ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೇಳಿಕೆಗಳನ್ನೇ ಉಲ್ಲೇಖಿಸಿ " ಸಂಸತ್ ನಲ್ಲಿ ನಡೆಯುವ ಚರ್ಚೆಗಳಿಗೆ ಅಡ್ಡಿ ಉಂಟು ಮಾಡಿದರೆ ಯಾರಿಗೂ ಲಾಭವಾಗುವುದಿಲ್ಲ, ಪ್ರತಿಪಕ್ಷಗಳಿಗೂ ಸೇರಿ ದೇಶದ ಜನತೆಗೆ ನಷ್ಟ ಉಂಟಾಗಲಿದೆ, ಇದು ನರೇಂದ್ರ ಮೋದಿ ಅವರ ಉಪದೇಶ ಅಲ್ಲ, ಈ ಹಿಂದೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಸಂಸತ್ ನಲ್ಲಿ ನೀಡಿದ್ದ ಹೇಳಿಕೆ" ಎಂದು ಹೇಳಿದ್ದಾರೆ.
ಕಳೆದ 60 ವರ್ಷಗಳಲ್ಲಿ ಬಡವರಿಗಾಗಿ ಕಾಂಗ್ರೆಸ್ ನವರು ಏನನ್ನಾದರೂ ಮಾಡಿದ್ದರೆ ಅದನ್ನು ಯಾರೂ ನಿರಾಕರಿಸುವುದಿಲ್ಲ, ಹಾಗೆಯೇ ಕಾಂಗ್ರೆಸ್ ನವರು ಬಡವರಿಗೆ ಉಪಯುಕ್ತವಾದದ್ದನ್ನು ಮಾಡಿದ್ದರೆ ಇಂದು ಬಡವರು ಸಂಕಷ್ಟ ಎದುರಿಸುತ್ತಿರಲಿಲ್ಲ, ನಾವು 60 ವರ್ಷಗಳ ಕಾಂಗ್ರೆಸ್ ದುರಾಡಳಿತವನ್ನು ಸರಿ ದಾರಿಗೆ ತರುವ ಕೆಲಸ ಮಾಡುತ್ತಿದ್ದೇವೆ, ದೇಶದಲ್ಲಿ ಬಡತನದ ಬಿತ್ತಿದ್ದು ಕಾಂಗ್ರೆಸ್, ಅವರ 60 ವರ್ಷಗಳ ದುರಾಡಳಿತವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಮೋದಿ ಕಾಂಗ್ರೆಸ್ ವಿರುದ್ಧ ವಾಕ್ ಪ್ರಹಾರ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


