ಮೋದಿ ವಿರುದ್ಧ ಅವಹೇಳನಕಾರಿ ಭಾಷಣ: ಆಪ್ ಶಾಸಕನ ವಿರುದ್ಧ ಬಿಜೆಪಿ ಕೇಸ್
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿದ...

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ ಶಾಸಕ ಅಮನತುಲ್ಲಾ ಖಾನ್ ವಿರುದ್ಧ ಬಿಜೆಪಿ ಪೊಲೀಸರಿಗೆ ದೂರು ನೀಡಿದೆ.
ನಿನ್ನೆಯಷ್ಟೇ ಅಮನತುಲ್ಲಾ ಖಾನ್ ಅವಹೇಳನಕಾರಿ ಭಾಷಣ ಮಾಡಿದ್ದ ವಿಡಿಯೋ ಸಾಮಾಜಿಕ ತಾಣದಲ್ಲಿ ಭಾರಿ ಸುದ್ದಿ ಮಾಡಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ದೆಹಲಿ ಬಿಜೆಪಿ ಘಟಕ ಒಖ್ಲಾ ಶಾಸಕನ ವಿರುದ್ಧ ಕೇಸ್ ದಾಖಲಿಸಿದೆ.
ದೆಹಲಿ ಬಿಜೆಪಿ ಅಧ್ಯಕ್ಷ ಸತೀಶ್ ಉಪಾಧ್ಯಯ ನೇತೃತ್ವದ ಬಿಜೆಪಿ ನಾಯಕರ ನಿಯೋಗ ಇಂದು ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರನ್ನು ಭೇಟಿ ಮಾಡಿ ಅಮನತುಲ್ಲಾ ಭಾಷಣದ ವಿಡಿಯೋದ ಪ್ರತಿಯೊಂದನ್ನು ಹಸ್ತಾಂತರಿಸಿದರು.
ಇನ್ನು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಆಪ್ ಶಾಸಕ, ನಾನು ದಲಿತ ವಿರೋಧಿ ಹಾಗೂ ಅಲ್ಪ ಸಂಖ್ಯಾತ ವಿರೋಧಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ನೈತಿಕವಾಗಿ ಟೀಕಿಸಿರುವುದಾಗಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


