ಇಶ್ರಾತ್ ಜಹಾನ್ ಪ್ರಕರಣ: ಅಫಿಡವಿಟ್ ಸಮರ್ಥಿಸಿಕೊಂಡ ಮೊಯ್ಲಿ
ಗುಜರಾತ್ ಎನ್ ಕೌಂಟರ್ ಪ್ರಕರಣ ಸಂಬಂಧ 2ನೇ ಅಫಿಡವಿಟ್ ಸಲ್ಲಿಸಿದ್ದ ಯುಪಿಎ ಸರ್ಕಾರದ ನಿರ್ಧಾರವನ್ನು ಕೇಂದ್ರ ಮಾಜಿ ಕಾನೂನು ಸಚಿವ ವೀರಪ್ಪ ಮೊಯ್ಲಿ ಅವರು ಗುರುವಾರ ಸಮರ್ಥಿಸಿಕೊಂಡಿದ್ದಾರೆ...

ನವದೆಹಲಿ: ಗುಜರಾತ್ ಎನ್ ಕೌಂಟರ್ ಪ್ರಕರಣ ಸಂಬಂಧ 2ನೇ ಅಫಿಡವಿಟ್ ಸಲ್ಲಿಸಿದ್ದ ಯುಪಿಎ ಸರ್ಕಾರದ ನಿರ್ಧಾರವನ್ನು ಕೇಂದ್ರ ಮಾಜಿ ಕಾನೂನು ಸಚಿವ ವೀರಪ್ಪ ಮೊಯ್ಲಿ ಅವರು ಗುರುವಾರ ಸಮರ್ಥಿಸಿಕೊಂಡಿದ್ದಾರೆ.
ಇಶ್ರಾತ್ ಜಹಾನ್ ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿರುವ ಅವರು, ಎರಡನೇ ಅಫಿಡವಿಟ್ ಸಲ್ಲಿಸುವುದು ಅಪರಾಧವಲ್ಲ. ಮೊದಲ ಪ್ರಮಾಣಪತ್ರವನ್ನು ಐಬಿ ಮತ್ತು ಗುಪ್ತಚರ ಇಲಾಖೆ ನೀಡಿರುವ ಮಾಹಿತಿ ಆಧಾರದಲ್ಲಿ ಸಲ್ಲಿಸಲಾಗಿದೆ. ಎರಡೇ ಅಫಿಡವಿಟ್ ನ್ನು ತನಿಖಾ ವರದಿ ಆಧಾರದ ಮೇಲೆ ಸಲ್ಲಿಸಲಾಗಿದೆ. ಇದರಲ್ಲಿ ಯಾವುದೇ ತಪ್ಪಿಲ್ಲ. ಒಂದು ವೇಳೆ ದೋಷಗಳಿದ್ದಿದ್ದೇ ಆದರೆ ನ್ಯಾಯಾಲಯ ಅದನ್ನು ಗುರ್ತಿಸುತ್ತಿತ್ತು ಎಂದು ಹೇಳಿದ್ದಾರೆ.
ಇದೇ ವೇಳೆ ಮಾಜಿ ಗೃಹ ಕಾರ್ಯದರ್ಶಿ ಜಿ.ಕೆ. ಪಿಳ್ಳೈ ವಿರುದ್ಧ ಕಿಡಿಕಾಡಿರುವ ಅವರು, ಪಿಳ್ಳೈ ಅವರು ಈಗ ತಮ್ಮ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಯತ್ನಿಸುತ್ತಿದ್ದಾರೆ. ಇದು ನಿಜಕ್ಕೂ ಖಂಡನೀಯವಾದದ್ದು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


