ದೇಶ

ರಾಷ್ಟ್ರವಿರೋಧಿಗಳನ್ನು ಬೆಂಬಲಿಸುತ್ತಿರುವ ಕಾಂಗ್ರೆಸ್ ಗೆ ನಾಚಿಕೆಯಾಗಬೇಕು: ಅಮಿತ್ ಶಾ

ಜೆ ಎನ್ ಯು ವಿವಾದಕ್ಕೆ ಸಂಬಂಧಿಸಿದಂತೆ ಮತ್ತೆ ಕಾಂಗ್ರೆಸ್ ವಿರುದ್ಧ ಮಾತನಾಡಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ರಾಷ್ಟ್ರವಿರೋಧಿಗಳನ್ನು ಬೆಂಬಲಿಸುತ್ತಿರುವ ಕಾಂಗ್ರೆಸ್ ಗೆ ನಾಚಿಕೆಯಾಗಬೇಕು ಎಂದಿದ್ದಾರೆ.

ರಾಷ್ಟ್ರವಿರೋಧಿಗಳನ್ನು ಬೆಂಬಲಿಸುತ್ತಿರುವ ಕಾಂಗ್ರೆಸ್ ಗೆ ನಾಚಿಕೆಯಾಗಬೇಕು: ಅಮಿತ್ ಶಾ
ಅಮಿತ್ ಶಾ
Published On :

ಮಥುರಾ: ಜೆ ಎನ್ ಯು ವಿವಾದಕ್ಕೆ ಸಂಬಂಧಿಸಿದಂತೆ ಮತ್ತೆ ಕಾಂಗ್ರೆಸ್ ವಿರುದ್ಧ ಮಾತನಾಡಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ರಾಷ್ಟ್ರವಿರೋಧಿಗಳನ್ನು ಬೆಂಬಲಿಸುತ್ತಿರುವ ಕಾಂಗ್ರೆಸ್ ಗೆ ನಾಚಿಕೆಯಾಗಬೇಕು ಎಂದಿದ್ದಾರೆ.
ಮಥುರಾದಲ್ಲಿ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿರುವ ಅಮಿತ್ ಶಾ, ದೇಶವಿರೋಧಿಗಳನ್ನು ದೇಶಭಕ್ತರಂತೆ ಬಿಂಬಿಸುತ್ತಿರುವುದು ದುರದೃಷ್ಟಕರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇಶವಿರೋಧಿ ಘೋಷಣೆಗಳನ್ನು ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಸಮರ್ಥಿಸಿಕೊಳ್ಳಲಾಗುತ್ತಿದ್ದು ಇಂತಹ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ದೇಶ ಪ್ರೇಮಿಗಳಂತೆ ಬಿಂಬಿಸುವ ಕೆಲಸ ನಡೆಯುತ್ತಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಇನ್ನು ಬಿಜೆಪಿ ಸರ್ಕಾರದ ಬಗ್ಗೆ ಮಾತನಾಡಿದ ಅವರು ಕೇಂದ್ರದಲ್ಲಿ ಇನ್ನು ಕನಿಷ್ಠ 25 ವರ್ಷಗಳು ಬಿಜೆಪಿ ಸರ್ಕಾರ ಇರಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.