ದೇಶ

ಕರಾಚಿ ಸಾಹಿತ್ಯ ಉತ್ಸವದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಭಾಗಿ

ಪಾಕಿಸ್ತಾನದ ಕರಾಚಿಯಲ್ಲಿ ನಡೆಯುವ 2017ರ ಸಾಹಿತ್ಯ ಉತ್ಸವದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾಗವಹಿಸುತ್ತಿದ್ದಾರೆ.

ಕರಾಚಿ ಸಾಹಿತ್ಯ ಉತ್ಸವದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಭಾಗಿ
ಅರವಿಂದ್ ಕೇಜ್ರಿವಾಲ್
Published On :
ನವದೆಹಲಿ: ಪಾಕಿಸ್ತಾನದ ಕರಾಚಿಯಲ್ಲಿ ನಡೆಯುವ 2017ರ ಸಾಹಿತ್ಯ ಉತ್ಸವದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾಗವಹಿಸುತ್ತಿದ್ದಾರೆ.
ಕರಾಚಿ ಸಾಹಿತ್ಯ ಉತ್ಸವದ ಸಂಘಟಕರು ನೀಡಿದ್ದ ಆಹ್ವಾನವನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಸ್ವೀಕರಿಸಿದ್ದಾರೆ,
ಇದಕ್ಕೂ ಮುನ್ನ ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಅವರು ಫೆಬ್ರವರಿ 5ರಂದು ನಡೆದ ಕರಾಚಿ ಸಾಹಿತ್ಯ ಉತ್ಸವದಲ್ಲಿ ಭಾಗವಹಿಸಬೇಕಿತ್ತು. ಆದರೆ ಅವರಿಗೆ ಪಾಕಿಸ್ತಾನ ವೀಸಾ ನೀಡಲು ನಿರಾಕರಿಸಿದ್ದರಿಂದ ಭಾಗವಹಿಸಲು ಸಾಧ್ಯವಾಗಿರಲಿಲ್ಲ.
ಕರಾಚಿ ಸಾಹಿತ್ಯ ಉತ್ಸವದಲ್ಲಿ ಭಾಗವಹಿಸುವ ಸಲುವಾಗಿ ಭಾರತದಿಂದ 18 ಜನರು ವೀಸಾಗಾಗಿ ಅರ್ಜಿ ಸಲ್ಲಿಸಿದ್ದರು. 17 ಜನರಿಗೆ ವೀಸಾ ನೀಡಿದ್ದ ಪಾಕ್‌ ಸರ್ಕಾರ ಅನುಪಮ್‌ ಖೇರ್‌ ಅವರ ವೀಸಾ ಅರ್ಜಿಯನ್ನು ತಿರಸ್ಕರಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.