ದೇಶ

ಗೋಡ್ಸೆಯನ್ನು ಆರಾಧಕರ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಗಳಿಗೆ ಕೇಂದ್ರ ರಾಜನಾಥ್ ಸಿಂಗ್ ಸೂಚನೆ

ಗೋಡ್ಸೆ ಆರಾಧಕರ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಗಳಿಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸೂಚನೆ ನೀಡಿದ್ದಾರೆ.

ಗೋಡ್ಸೆಯನ್ನು ಆರಾಧಕರ  ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಗಳಿಗೆ ಕೇಂದ್ರ  ರಾಜನಾಥ್ ಸಿಂಗ್ ಸೂಚನೆ
ರಾಜನಾಥ್ ಸಿಂಗ್
Published On :

ನವದೆಹಲಿ: ಗೋಡ್ಸೆ ಆರಾಧಕರ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಗಳಿಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸೂಚನೆ ನೀಡಿದ್ದಾರೆ.
ಸಂಸತ್ ನಲ್ಲಿ ಮಾತನಾಡಿರುವ ರಾಜನಾಥ್ ಸಿಂಗ್, ನಾಥುರಾಮ್ ಗೋಡ್ಸೆಯನ್ನು ಆರಾಧಿಸುವುದು ಹೇಗೆ ಸಾಧ್ಯವಾಗುತ್ತದೆ? ಗೋಡ್ಸೆಯನ್ನು ಆರಾಧಿಸುವವರ ವಿರುದ್ಧ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಗಳನ್ನು ಕೇಂದ್ರ ಸರ್ಕಾರ ತಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮಾ.4 ರಂದು ಹಿಂದೂ ಮಹಾಸಭಾದ ಸದಸ್ಯರು ಗೋಡ್ಸೆಯನ್ನು ತಮ್ಮ ನಾಯಕ, ನಮ್ಮ ವಿರುದ್ಧ ಕೈಗೊಳ್ಳುವ ಕ್ರಮಗಳಿಗೆ ಹೆದರುವುದಿಲ್ಲ ಎಂದು ಹೇಳಿದ್ದರು. ಭಾರತ ಮತ್ತಷ್ಟು ಛಿದ್ರಗೊಳ್ಳದೇ ಇರಲು ಗೋಡ್ಸೆಯೇ ಕಾರಣ ಎಂದು ಹಿಂದೂ ಮಹಾಸಭಾದ ನಾಯಕ ಭರತ್ ರಜಪೂತ್  ಅಭಿಪ್ರಾಯಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ರಾಜನಾಥ್ ಸಿಂಗ್, ಗೋಡ್ಸೆ ಆರಾಧಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.