ಕಾಶ್ಮೀರಿಗಳ ಕಲ್ಯಾಣಕ್ಕಾಗಿ ಸರ್ಕಾರ ರಚಿಸುವೆ: ಮೆಹಬೂಬಾ ಮುಫ್ತಿ
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಜನತಾ ಪಕ್ಷದೊಂದಿಗೆ ಸರ್ಕಾರ ರಚಿಸುವ ಸುಳಿವು ನೀಡಿರುವ ಪಿಡಿಪಿ...

Published On :
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಜನತಾ ಪಕ್ಷದೊಂದಿಗೆ ಸರ್ಕಾರ ರಚಿಸುವ ಸುಳಿವು ನೀಡಿರುವ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು, ಕಣಿವೆ ರಾಜ್ಯದ ಜನರ ಕಲ್ಯಾಣಕ್ಕಾಗಿ ತಾನು ಸರ್ಕಾರ ರಚಿಸುವುದಾಗಿ ಶನಿವಾರ ಹೇಳಿದ್ದಾರೆ.
'ನಾನು ಹಠಮಾರಿ ಮಹಿಳೆ ಅಲ್ಲ. ಕಾಶ್ಮೀರ ಜನರಿಗೆ ಒಳ್ಳೆಯದಾಗುವುದಾದರೆ ಬಿಜೆಪಿಯೊಂದಿಗೆ ಸರ್ಕಾರ ರಚಿಸುತ್ತೇನೆ' ಎಂದು ಮುಫ್ತಿ ತಿಳಿಸಿದ್ದಾರೆ.
ನಿನ್ನೆಯಷ್ಟೇ ಈ ಸಂಬಂಧ ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಎನ್ ಎನ್ ವೋಹ್ರಾ ಅವರನ್ನು ಭೇಟಿ ಮಾಡಿದ್ದ ಮುಫ್ತಿ, ರಾಜಕೀಯ ವಿಷಯಗಳ ಬಗ್ಗೆ ಹಾಗೂ ರಾಜ್ಯದ ಮುಂದಿರುವ ಹಲವು ಬಗೆಯ ಸವಾಲುಗಳ ಕುರಿತು ಚರ್ಚಿಸಿದ್ದರು.
ವೋಹ್ರಾ ಅವರನ್ನು ಭೇಟಿಗೂ ಮುನ್ನ ಮಾಧ್ಯಮದೊಂದಿಗೆ ಮಾತನಾಡಿದ್ದ ಮುಫ್ತಿ, "ನನ್ನ ತಂದೆ ಮುಫ್ತಿ ಮೊಹಮ್ಮದ್ ಸಯೀದ್ ಅವರು ಬಿಜೆಪಿಯೊಂದಿಗೆ ಕೈಜೋಡಿಸಿರಲಿಲ್ಲ. ಬದಲಾಗಿ ಕೇಂದ್ರ ಸರ್ಕಾರದ ಬೆಂಬಲದೊಂದಿಗೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಿದ್ದರು ಮತ್ತು ಜಮ್ಮು ಕಾಶ್ಮೀರದ ಜನರ ಸಮಗ್ರ ಒಳಿತಿಗಾಗಿ ಅವರು ಹಾಗೆ ಮಾಡಿದ್ದರು' ಎಂದು ಹೇಳಿದ್ದರು.
ಮುಫ್ತಿ ಮೊಹಮ್ಮದ್ ಸಯೀದ್ ಅವರ ನಿಧನದ ನಂತರ, ಕಳೆದ ಜನವರಿ 8ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜ್ಯಪಾಲದ ಆಡಳಿತ ಜಾರಿಯಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


