ಎಎಂಯು ವಿವಿ ಕೇಂದ್ರಗಳು ಕಾನೂನು ಬಾಹಿರ ಅಲ್ಲ: ಮೋದಿಗೆ ಉಪಕುಲಪತಿಯಿಂದ ಮಾಹಿತಿ
ಅಲೀಘರ್ ಮುಸ್ಲಿಂ ವಿವಿಯ ಕೇಂದ್ರಗಳನ್ನು ಮಾನವ ಸಂಪನ್ಮೂಲ ಇಲಾಖೆ ಕಾನೂನು ಬಾಹಿರ ಎಂದು ಗುರುತಿಸಿದ್ದ ವಿಷಯದ ಕುರಿತು ಎಎಂಯು ನ ಉಪಕುಲಪತಿ, ನಿವೃತ್ತ ಲೆಫ್ಟಿನೆಂಟ್ ಜನರಲ್ ಜಮೀರ್ ಉದ್ದೀನ್ ಶಾ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ

ನವದೆಹಲಿ: ಅಲೀಘರ್ ಮುಸ್ಲಿಂ ವಿವಿಯ(ಎಎಂಯು) ಕೇಂದ್ರಗಳನ್ನು ಮಾನವ ಸಂಪನ್ಮೂಲ ಇಲಾಖೆ ಕಾನೂನು ಬಾಹಿರ ಎಂದು ಗುರುತಿಸಿದ್ದ ವಿಷಯದ ಕುರಿತು ಎಎಂಯು ನ ಉಪಕುಲಪತಿ, ನಿವೃತ್ತ ಲೆಫ್ಟಿನೆಂಟ್ ಜನರಲ್ ಜಮೀರ್ ಉದ್ದೀನ್ ಶಾ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಸ್ಪಷ್ಟನೆ ನೀಡಿದ್ದಾರೆ.
" ಮಾನವ ಸಂಪನ್ಮೂಲ ಇಲಾಖೆ ಕಾನೂನು ಬಾಹಿರ ಎಂದು ಗುರುತಿಸಿರುವ ಕೇರಳ, ಪಶ್ಚಿಮ ಬಂಗಾಳ, ಬಿಹಾರ ಕೇಂದ್ರಗಳನ್ನು ಕೇಂದ್ರ ಸರ್ಕಾರ ಹಾಗೂ ರಾಷ್ಟ್ರಪತಿಗಳೇ ಮಂಜೂರು ಮಾಡಿದ್ದು ಕಾನೂನು ಬಾಹಿರ ಎಂದು ಹೇಳಲು ಹೇಗೆ ಸಾಧ್ಯ"? ಎಂದು ಶಾ ಪ್ರಶ್ನಿಸಿದ್ದಾರೆ.
ಐದು ಜನರ ನಿಯೋಗದೊಂದಿಗೆ ಪ್ರಧಾನಿ ಅವರನ್ನು ಭೇಟಿ ಮಾಡಿದ್ದ ಜಮೀರ್ ಉದ್ದೀನ್ ಶಾ, ವಿಶ್ವವಿದ್ಯಾನಿಯದಲ್ಲಿ ಗಂಗಾ ನದಿ ಪುನರುಜ್ಜೀವನ ಹಾಗೂ ಕೃಷಿ ತಂತ್ರಜ್ಞಾನ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಂಶೋಧನೆ ನಡೆಯುತ್ತಿರುವುದರ ಬಗ್ಗೆ ಜಮೀರ್ ಉದ್ದೀನ್ ಶಾ ಪ್ರಧಾನಿ ಮೋದಿಗೆ ಮಾಹಿತಿ ನೀಡಿದ್ದಾರೆ.
ಹಲವು ಬಾರಿ ಯತ್ನಿಸಿದರು ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ, ಮಾರ್ಚ್.10 ರಂದು ಭೇಟಿಗೆ ಅವಕಾಶ ನೀಡಲಾಗಿದ್ದು, ಇದು ಸ್ಮೃತಿ ಇರಾನಿ ಅವರು ಅಧಿಕಾರ ಸ್ವೀಕರಿಸಿದಾಗಿನಿಂದ ನಡೆಯಲಿರುವ ಎರಡನೇ ಭೇಟಿ ಎಂದು ಜಮೀರ್ ಉದ್ದೀನ್ ಶಾ ಪ್ರಧಾನಿಗೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


