ಬದಲಾಯ್ತು ನರೇಂದ್ರ ಮೋದಿ ಹೇರ್ ಸ್ಟೈಲ್
ರಧಾನಿ ನರೇಂದ್ರ ಮೋದಿ ಅವರು ತಮ್ಮ ಹೇರ್ ಸ್ಟೈಲ್ ಚೇಂಜ್ ಮಾಡಿಕೊಂಡಿರುವುದು ಲೋಕಸಭೆಯಲ್ಲಿ ಎಲ್ಲರ ಗಮನ ಸೆಳೆದಿದೆ....

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹೇರ್ ಸ್ಟೈಲ್ ಚೇಂಜ್ ಮಾಡಿಕೊಂಡಿರುವುದು ಲೋಕಸಭೆಯಲ್ಲಿ ಎಲ್ಲರ ಗಮನ ಸೆಳೆದಿದೆ. ತಮ್ಮ ಗುಂಗುರು ಕೂದಲನ್ನು ನೀಟಾಗಿ ಬಾಚಿಕೊಂಡು, ಸಂಸತ್ತಿನಲ್ಲಿ ಮೋದಿ ಫ್ರೆಶ್ ಆಗಿ ಕಾಣುತ್ತಿದ್ದರು.
ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಮೋದಿ ತಲೆ ಕಡೆ ಗಮನ ಹರಿಸಿದ್ದಾರೆ. ಮಾತ್ರವಲ್ಲದೇ ಮೋದಿಯ ಕೇಶವಿನ್ಯಾಸದ ಬಗ್ಗೆ ಟ್ವೀಟ್ ಮಾಡುವ ಮೂಲಕ ಎಲ್ಲರ ಗಮನಕ್ಕೆ ತಂದಿದ್ದಾರೆ.
ಮೋದಿ ತಮ್ಮ ಹೇರ್ ಸ್ಟೈಲ್ ಬದಲಾಯಿಸಿಕೊಂಡಿದ್ದಾರೆ. ಹೀಗಾಗಿ ಜನರು ಕೇಳುತ್ತಿದ್ದಾರೆ ಮೋದಿ ಅವರ ಕೇಶ ವಿನ್ಯಾಸಕ ಯಾರು? ಎಂಬುದಾಗಿ ದಿಗ್ವಿಜಯ್ ಸಿಂಗ್ ಟ್ವಿಟ್ ಮಾಡಿದ್ದಾರೆ.
ಲೋಕಸಭೆಯಲ್ಲಿ ವಿರೋಧ ಪಕ್ಷದವರಿಗೆ ಸಲಹೆ ನೀಡುವ ಸಂದರ್ಭದಲ್ಲಿ ಎಲ್ಲರ ಚಿತ್ತ ಮೋದಿ ವಾಕ್ಚಾತುರ್ಯದತ್ತ ನೆಟ್ಟಿತ್ತು. ಆದರೆ ದಿಗ್ವಿಜಯ ಸಿಂಗ್ ಮಾತ್ರ ಮೋದಿ ಕೇಶ ವಿನ್ಯಾಸದ ಬಗ್ಗೆ ಗಮನ ಹರಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


