ಸೋನಿಯಾಗೆ ಅನಾರೋಗ್ಯ: ಮಹಿಳಾ ಜನಪ್ರತಿನಿಧಿಗಳ ಸಮ್ಮೇಳನಕ್ಕೆ ಗೈರು
ಪ್ರಥಮ ಬಾರಿಗೆ ನಡೆಯುತ್ತಿರುವ ಮಹಿಳಾ ಜನಪ್ರತಿನಿಧಿಗಳ ಸಮ್ಮೇಳನಕ್ಕೆ ಸಂಸದೆ, ಎಐಸಿಸಿ ಅಧ್ಯಕ್ಷ್ಯೆ ಸೋನಿಯಾ ಗಾಂಧಿ ಗೈರು ಹಾಜರಾಗಿದ್ದಾರೆ.

ನವದೆಹಲಿ: ಪ್ರಥಮ ಬಾರಿಗೆ ನಡೆಯುತ್ತಿರುವ ಮಹಿಳಾ ಜನಪ್ರತಿನಿಧಿಗಳ ಸಮ್ಮೇಳನಕ್ಕೆ ಸಂಸದೆ, ಎಐಸಿಸಿ ಅಧ್ಯಕ್ಷ್ಯೆ ಸೋನಿಯಾ ಗಾಂಧಿ ಗೈರು ಹಾಜರಾಗಿದ್ದಾರೆ.
ಅನಾರೋಗ್ಯದ ಕಾರಣದಿಂದ ಸೋನಿಯಾ ಗಾಂಧಿ ಸಮ್ಮೇಳನಕ್ಕೆ ಗೈರುಹಾಜರಾಗಿದ್ದಾರೆ ಎಂದು ಹೇಳಲಾಗಿದೆ. ಬಾಂಗ್ಲಾದೇಶದ ಸಂಸದೆ ಶಿರಿನ್ ಚೌಧರಿ, ಸ್ಪೀಕರ್ ಸುಮಿತ್ರಾ ಮಹಾಜನ್, ಅಲ್ಪಸಂಖ್ಯಾತ ಇಲಾಖೆ ಸಚಿವೆ ನಜ್ಮಾ ಹೆಫ್ತುಲಾ, ವಿದೇಶಾಂಗ ಇಲಾಖೆ ಸುಷ್ಮಾ ಸ್ವರಾಜ್ ಅವರೊಂದಿಗೆ ಸೋನಿಯಾ ಗಾಂಧಿ ಉದ್ಘಾಟನಾ ಸಮಾರಂಭಾದಲ್ಲಿ ಭಾಷಣ ಮಾಡಬೇಕಿತ್ತು.
ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಆಯೋಜಿಸಿರುವ ಸಮ್ಮೇಳನದಲ್ಲಿ ಭಾಗವಹಿಸಬೇಕಿದ್ದ ಸೋನಿಯಾ ಗಾಂಧಿ ಅವರು ಅನಾರೋಗ್ಯದ ಕಾರಣ ಕಾರ್ಯಕ್ರಮದಲ್ಲಿ ಭಾವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. ದೇಶಾದ್ಯಂತ ಇರುವ ಮಹಿಳಾ ಜನಪ್ರತಿನಿಧಿಗಳು ಪರಸ್ಪರ ಅನುಭವಗಳನ್ನು ಹಂಚಿಕೊಳ್ಳಲು ಹಾಗೂ ಚರ್ಚೆ ನಡೆಸಲು ಮಹಿಳಾ ಜನಪ್ರತಿನಿಧಿಗಳ ಸಮ್ಮೇಳನ ಸಹಕಾರಿಯಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


