ಏಮ್ಸ್ ಆವರಣದಲ್ಲಿ ಕಾಮಗಾರಿ ವೇಳೆ ಮಣ್ಣು ಕುಸಿತ: 2 ಕಾರ್ಮಿಕರ ಸಾವು
ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ(ಏಮ್ಸ್) ಆವರಣದಲ್ಲಿ ಕಟ್ಟಡದ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ...

ನವದೆಹಲಿ: ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ(ಏಮ್ಸ್) ಆವರಣದಲ್ಲಿ ಕಟ್ಟಡದ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಏಮ್ಸ್ ನ ಶವಗಾರದ ಬಳಿ ಐವರು ಕಾರ್ಮಿಕರು ಕಟ್ಟಡ ನಿರ್ಮಾಣದ ಕಾರ್ಯದಲ್ಲಿ ತೊಡಗಿದ್ದಾಗ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ.
ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಅಗ್ನಿ ಶಾಮಕ ಸಿಬ್ಬಂದಿಗೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗೆ ಮಾಹಿತಿ ನೀಡಿ ಸ್ಥಳಕ್ಕೆ ಕರೆಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು.
ರಕ್ಷಣಾ ಕಾರ್ಯಾಚರಣೆ ವೇಳೆ ಐವರನ್ನು ಹೊರತೆಗೆಯಲಾಗಿದೆ. ಅವರಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ ಮೂವರ ಸ್ಥಿತಿ ಗಂಭೀರವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


