ದೇಶ

ನಿಜ ಜೀವನದಲ್ಲೂ ಅನುಪಮ್ ವಿಲನ್ ಆಗಿದ್ದಾರೆ: ಯೋಗಿ ಆದಿತ್ಯನಾಥ್

ಬಾಲಿವುಡ್ ನಟ ಅನುಪಮ್ ಖೇರ್ ಅವರು ನಿಜ ಜೀವನದಲ್ಲೂ ಖಳನಾಯಕನಾಗಿದ್ದಾರೆಂದು ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ...

ನಿಜ ಜೀವನದಲ್ಲೂ ಅನುಪಮ್ ವಿಲನ್ ಆಗಿದ್ದಾರೆ: ಯೋಗಿ ಆದಿತ್ಯನಾಥ್
ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್
Published On :

ಗೋರಾಖ್ಪುರ: ಬಾಲಿವುಡ್ ನಟ ಅನುಪಮ್ ಖೇರ್ ಅವರು ನಿಜ ಜೀವನದಲ್ಲೂ ಖಳನಾಯಕನಾಗಿದ್ದಾರೆಂದು ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.

ಈ ಕುರಿತಂತೆ ಕೋಲ್ಕತಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಅನುಪಮ್ ಖೇರ್ ಖಳನಾಯಕನೆಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಅನುಪಮ್ ಖೇರ್ ಅವರು ನಟನೆಯಲ್ಲಿ ಮಾತ್ರವೇ ಖಳನಾಯಕನಲ್ಲ. ನಿಜ ಜೀವನದಲ್ಲೂ ಖಳನಾಯಕರಾಗಿದ್ದಾರೆ. ಕೋಲ್ಕತಾದಲ್ಲಿ ಖೇರ್ ಅವರು ನೀಡಿದ್ದ ಹೇಳಿಕೆ ಸಂಬಂಧ ಮತ್ತೇನನ್ನೂ ಹೇಳಲು ಇಚ್ಛಿಸುವುದಿಲ್ಲ ಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಕೋಲ್ಕತಾದಲ್ಲಿ ಬೆಳೆಯುತ್ತಿರುವ ಅಸಹಿಷ್ಣುತೆ ಕುರಿತಂತೆ ಚರ್ಚೆಯೊಂದರಲ್ಲಿ ಮಾತನಾಡಿದ್ದ ಅನುಪಮ್ ಖೇರ್ ಅವರು, ಸಾಧ್ವಿ ಪ್ರಾಚಿ ಹಾಗೂ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಕಿಡಿಕಾರಿದ್ದರು. ಯೋಗಿ ಹಾಗೂ ಸಾಧ್ವಿ ಪ್ರಾಚಿಯವರು ಅಸಂಬ್ಧವಾಗಿ ಮಾತನಾಡುತ್ತಿದ್ದಾರೆ. ಅವರನ್ನು ಕೂಡಲೇ ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಬೇಕು ಮತ್ತು ಜೈಲಿಗೆ ಹಾಕಬೇಕು ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಯೋಗಿ ಆದಿತ್ಯನಾಥ್ ಈ ರೀತಿಯಾಗಿ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.